ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 1 ರಿಸರ್ಚ್ ಅಸೋಸಿಯೇಟ್ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕೃಷಿ ವಿವಿಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬಹುದು. ಅಲ್ಲಿರುವ ನೋಟಿಫಿಕೇಶನ್ ನೋಡಿ ಬಳಿಕ ಅರ್ಜಿ ಸಲ್ಲಿಸಬಹುದು. ವಿಜಯಪುರದಲ್ಲಿ ಉದ್ಯೋಗ ಮಾಡುವವರು ಈ ಅವಕಾಶ ಸದುಪಯೋಗಪಡಿಸಿಕೊಳ್ಳಿ. ಅಲ್ಲಿನ ಸ್ಥಳೀಯ ಅಭ್ಯರ್ಥಿಗಳು ಕೂಡಲೇ ಅರ್ಜಿ ಹಾಕಿ. ಇದೇ ನವೆಂಬರ್ 26ರಂದು ಬೆಳಗ್ಗೆ 10.30ಕ್ಕೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು.
ವಿದ್ಯಾರ್ಹತೆ ಏನಿರಬೇಕು?
ಅಭ್ಯರ್ಥಿಗಳು ಕಡ್ಡಾಯವಾಗಿ ಪ್ಲಾಂಟ್ ಪಾಥಾಲಜಿ ವಿಭಾಗದಲ್ಲಿ ಪಿಎಚ್.ಡಿ ಪೂರ್ಣಗೊಳಿಸಿರಬೇಕು.
ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು?
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯವು ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ.
ಅಭ್ಯರ್ಥಿಗಳನ್ನು ಹೇಗೆ ಆಯ್ಕೆ ಮಾಡಲಾಗುತ್ತೆ?
ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೀಡಲಾಗುತ್ತದೆ. ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.
ಸಂದರ್ಶನ ಎಲ್ಲಿ ನಡೆಯುತ್ತದೆ?
ಸಂದರ್ಶಕರ ಕೊಠಡಿ
ಡೀನ್ (ಕೃಷಿ)
ಕೃಷಿ ವಿಶ್ವವಿದ್ಯಾಲಯ
ವಿಜಯಪುರ
ಕರ್ನಾಟಕ
ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 12/11/2022
ಸಂದರ್ಶನ ನಡೆಯುವ ದಿನಾಂಕ: 26/11/2022 ಬೆಳಗ್ಗೆ 10. 30ಕ್ಕೆ