ನವದೆಹಲಿ (New Delhi): ದೇಶದ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಕೇಂದ್ರ ಕಾನೂನು ಸಚಿವಾಲಯ ಮಾಹಿತಿ ನೀಡಿದೆ. ಶೀಘ್ರವೇ ಹಾಲಿ ಸಿಜೆಐ ಎನ್.ವಿ.ರಮಣ ಅವರ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ. ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಸಿಜೆಐ ರಮಣ ಅವರ ಸೇವಾವಧಿ ಆಗಸ್ಟ್ 26, 2022 ರಂದು ಕೊನೆಗೊಳ್ಳಲಿದ್ದು, ಅಂದೇ ನ್ಯಾ.ಉದಯ್ ಉಮೇಶ್ ಲಲಿತ್ ಅವರು ಸಿಜೆಐ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.