ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್ಕೌಂಟರ್ನಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡ ಹತನಾಗಿದ್ದಾನೆ.
ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ ಕೆಲವು ದಿನಗಳಿಂದ ಈ ಭಾಗದಲ್ಲಿ ನಕ್ಸಲ್ ಚಟುವಟಿಕೆ ಬಿರುಸುಗೊಂಡಿತ್ತು. ಹೀಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ಆರಂಭಿಸಿತ್ತು.
ಸೋಮವಾರ ರಾತ್ರಿ ಐದು ಮಂದಿ ಇದ್ದ ನಕ್ಸಲರ ತಂಡ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್ ಕೌಂಟರ್ ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.
Saval TV on YouTube