ಮನೆ Uncategorized ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ : ಮಾ.31ರ ವರೆಗೆ ವಾಹನಗಳಿಗೆ ಪ್ರವೇಶ ನಿರ್ಬಂಧ

ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ : ಮಾ.31ರ ವರೆಗೆ ವಾಹನಗಳಿಗೆ ಪ್ರವೇಶ ನಿರ್ಬಂಧ

0

ಚಾಮರಾಜನಗರ : ಯುಗಾದಿ ಹಬ್ಬದ ಅಂಗವಾಗಿ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ, ಆಟೋ ಮತ್ತು ಗೂಡ್ಸ್ ವಾಹನಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಹನ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.

ಪ್ರತಿ ವರ್ಷ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಹಬ್ಬದ ದಿನದಂದು ಸಾವಿರಾರು ಭಕ್ತರು ಭೇಟಿ ನೀಡುತ್ತಾರೆ. ಹಾಗಾಗಿ ವಾಹನದ ದಟ್ಟಣೆಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಇದೀಗ ಮುಂದಾಗಿದ್ದು, ಇಂದಿನಿಂದ ಮಾರ್ಚ್ 31ರವರೆಗೆ ಬೆಟ್ಟಕ್ಕೆ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಆದೇಶ ಹೊರಡಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೌದಳ್ಳಿ ಬಳಿ ವಾಹನಗಳ ಪಾರ್ಕಿಂಗ್ ಗೆ ವ್ಯವಸ್ಥೆ ಮಾಡಲಾಗಿದೆ. ಇಂದು ಅಮಾವಾಸ್ಯೆಯ ಪೂಜೆ, ಯುಗಾದಿ ರಥೋತ್ಸವ ಹಿನ್ನೆಲೆಯಲ್ಲಿ ಸಾವಿರಾರು ಭಕ್ತರು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ನಿರೀಕ್ಷೆ ಇದೆ ಹಾಗಾಗಿ ವಾಹನಗಳಿಗೆ ಪ್ರವೇಶ ನಿಷೇಧಿಸಲಾಗಿದೆ.