ಮನೆ ರಾಜ್ಯ ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ

ಪತಿಯ ಚಿತ್ರಹಿಂಸೆ ತಾಳಲಾರದೇ ಮಹಡಿಯಿಂದ ಜಿಗಿದ ಪತ್ನಿ

0

ಬೆಂಗಳೂರು : ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬಳು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪತಿಯ ಹಿಂಸೆಯಿಂದ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪ್ರಿಯಾ ಎಂದು ಗುರುತಿಸಲಾಗಿದೆ.

ಆಕೆಯ ಬೆನ್ನುಮೂಳೆ ಹಾಗೂ ಎರಡು ಕಾಲುಗಳಿಗೆ ಗಂಭೀರವಾಗಿ ಗಾಯಗಳಾಗಿವೆ. ಸದ್ಯ ಅಂಬೇಡ್ಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮಹಿಳೆಯ ಸ್ಥಿತಿ ಗಂಭೀರವಾಗಿದೆ.

ಪ್ರಿಯಾ ಹಾಗೂ ನಿಕ್ಸನ್ ಇಬ್ಬರೂ ಪ್ರೀತಿಸಿ ಮದುವೆಯಾಗಿದ್ದರು ಮದುವೆಯಾಗಿ 7 ವರ್ಷ ಆದರೂ ಮಕ್ಕಳಾಗಿಲ್ಲ ಎಂದು ಪ್ರತಿ ನಿತ್ಯ ಪತ್ನಿಗೆ ನಿಕ್ಸನ್‌ ಕಿರುಕುಳ ನೀಡುತಿದ್ದ. ಹೀಗಾಗಿ ಸೂಕ್ತ ಚಿಕಿತ್ಸೆ ಪಡೆದು ಇತ್ತೀಚೆಗಷ್ಟೇ ದಂಪತಿಗೆ ಹೆಣ್ಣು ಮಗು ಅಗಿತ್ತು.

ಮಗುವಾದ ಬಳಿಕ ಸಹ ಪ್ರತಿ ದಿನ ಕುಡಿದು ಬಂದು ಎಲ್ಲಿಯಾದರೂ ಹೋಗಿ ಸಾಯಿ ಎಂದು ಪತ್ನಿ ಮೇಲೆ ಹಲ್ಲೆ ಮಾಡುತಿದ್ದ. ಇದಕ್ಕೆ ಬೇಸತ್ತು ತಾನು ವಾಸವಿದ್ದ ಮನೆಯ 3ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಪತಿಯ ವಿರುದ್ಧ ಬಾಣವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.