ಮನೆ ರಾಜ್ಯ ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: 20 ಮಂದಿಗೆ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿತ: 20 ಮಂದಿಗೆ ಗಾಯ

0

ಆನೇಕಲ್: ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು 20 ಜನ ಗಾಯಗೊಂಡ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ಸಂಭವಿಸಿದೆ.

ಗಾಯಾಳು ಕಾರ್ಮಿಕರನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ. ಕಟ್ಟಡದ ಅವಶೇಷಗಳಡಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಶಂಕೆ ಇದೆ. ಎರಡನೇ ಅಂತಸ್ತಿನ ನಿರ್ಮಾಣದ ವೇಳೆ ಕಟ್ಟಡ ಕುಸಿದಿದೆ.

ಸ್ಥಳಕ್ಕೆ ಆನೇಕಲ್ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಹಿಂದಿನ ಲೇಖನನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ಲೋನ್ ಪಡೆದಿದ್ದ ಐವರ ಗ್ಯಾಂಗ್ ಬಂಧನ
ಮುಂದಿನ ಲೇಖನ‘ಸವಾಲ್ ಟಿವಿ ಮತ್ತು ಪತ್ರಿಕೆ’ ವತಿಯಿಂದ ‘ನಾಳು ತೋರುಗೆ’ ದಿನದರ್ಶಿಕೆ ಬಿಡುಗಡೆ