ಮನೆ ಸ್ಥಳೀಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ: ಭತ್ತ ಮತ್ತು ರಾಗಿ ಖರೀದಿ ಪ್ರಾರಂಭ ಸಂಬಂಧ ಸಭೆ

ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ: ಭತ್ತ ಮತ್ತು ರಾಗಿ ಖರೀದಿ ಪ್ರಾರಂಭ ಸಂಬಂಧ ಸಭೆ

0

ಮೈಸೂರು:  ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ  ಡಾ ಕೆ.ವಿ.ರಾಜೇಂದ್ರ ಅವರು ಮಾತನಾಡಿದರು.

ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ನೋಂದಣಿ ಕೇಂದ್ರ ತೆರೆಯಲಾಗಿದ್ದು,  ಈಗಾಗಲೇ ನೋಂದಣಿ ಆಗಿರುವ ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲು ಹಾಗೂ ಭತ್ತ ಮತ್ತು ರಾಗಿ ಖರೀದಿ ಹಂತದಲ್ಲಿ ಕೇಂದ್ರ ಸರ್ಕಾರದಿಂದ ನಿಗದಿಪಡಿಸಿದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸುವಂತೆ ಖರೀದಿ ಏಜೆಂನ್ಸಿ ಆದ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಯವರಿಗೆ ಸೂಚಿಸಿದರು.

ರೈತರಿಂದ ಭತ್ತ ಮತ್ತು ರಾಗಿಯನ್ನು ಖರೀದಿಸಲು  ತೆರೆಯಲಾಗಿರುವ ಪ್ರತಿ ಖರೀದಿ ಕೇಂದ್ರಕ್ಕೆ ಕೃಷಿ ಇಲಾಖೆಯ ವತಿಯಿಂದ ಗ್ರೇಡರ್‍ಗಳನ್ನು ನೇಮಿಸಬೇಕು. ಖರೀದಿ ದಿನಾಂಕ ಕುರಿತು ರೈತರಿಗೆ ಜಾಗೃತಿ ಮೂಡಿಸಲು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರಾದ ಕುಮುದಾ ಶರತ್, ಕೃಷಿ ಇಲಾಖೆಯ ಅಧಿಕಾರಿಗಳು, ರಾಜ್ಯ ಉಗ್ರಾಣ ನಿಗಮದ ಪ್ರಾದೇಶಿಕ ಆಯುಕ್ತರಾದ ರೇಣುಕಾ ಸ್ವಾಮಿ ಹಾಗೂ ಟಾಸ್ಕ್ ಫೋರ್ಸ್ ಸಮಿತಿಯ ಸದಸ್ಯರು, ಆಹಾರ ಇಲಾಖೆಯ ಅಧಿಕಾರಿಗಳು ಮತ್ತು ಖರೀದಿ ಅಧಿಕಾರಿಗಳು ಉಪಸ್ಥಿತರಿದ್ದರು.