ಹಾಸನ : ಪಿ.ಸಿ&ಪಿ.ಎನ್.ಡಿ.ಟಿ ಕಾಯ್ದೆ ಅನ್ವಯ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆ ಕಾನೂನು ಬಾಹಿರವಾಗಿರುತ್ತದೆ. ಹಾಗಾಗಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಪಿ.ಸಿ&ಪಿ.ಎನ್.ಡಿ.ಟಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿ ಹಾಗೂ ಪಿ.ಸಿ&ಪಿ.ಎನ್.ಡಿ.ಟಿ ಸಕ್ಷಮ ಪ್ರಾಧಿಕಾರಿಗಳಾದ ಸತ್ಯಭಾಮ ಅವರ ನಿರ್ದೇಶನದಂತೆ ಜಿಲ್ಲೆಯ ಕೆಲವು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ನಡೆಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅನಿಲ್ ಹೆಚ್ ತಿಳಿಸಿದ್ದಾರೆ.
ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ಪ್ರದೀಪ್ ಡಿ.ಪಿ ಹಾಗೂ ಜಿಲ್ಲಾ ಪಿ.ಸಿ&ಪಿ.ಎನ್.ಡಿ.ಟಿ ತಪಾಸಣಾ ಮತ್ತು ಮೇಲ್ವಿಚಾರಣಾ ಸಮಿತಿಯ ಸದಸ್ಯರುಗಳು ಭಾಗವಹಿಸಿರುತ್ತಾರೆ.