ಉತ್ತರ ಪ್ರದೇಶ: ಬಿಜೆಪಿ ನಾಯಕಿ ವಿಜಯಲಕ್ಷ್ಮೀ ಚಂದೇಲ್ ಮಗನ ಮೇಲೆ ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್ ಎಸೆದು ಪರಾರಿಯಾಗಿರುವ ಘಟನೆ ಪ್ರಯಾಗರಾಜನ ಜೂನ್ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಧಾನ್ ಸಿಂಗ್(20) ಕಾರಿನಲ್ಲಿ ಕುಳಿತಿರುವ ವೇಳೆ ಬೈಕ್’ನಲ್ಲಿ ಬಂದ ವ್ಯಕ್ತಿಗಳು ಕಚ್ಚಾ ಬಾಂಬ್ ಎಸೆದು ಪರಾರಿಯಾಗಿದ್ದಾರೆ.
ಸಂಭವನೀಯ ಅಪಾಯದಿಂದ ವಿಧಾನ್ ಸಿಂಗ್ ಪಾರಾಗಿದ್ದು, ಕಚ್ಚಾ ಬಾಂಬ್ ಎಸೆದ ಆರೋಪಿಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಂದು ಜೂನ್ಸಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಎರಡು ದ್ವಿಚಕ್ರ ವಾಹನದಲ್ಲಿ ಬಂದ ಯುವಕರುಗಳು ಈ ಕೆಲಸ ನಡೆಸಿದ್ದಾರೆ. ಕೃತ್ಯ ನಡೆಸಿದವರ ಬಗ್ಗೆ ಈವರೆಗೆ ಸುಳಿವು ಸಿಕ್ಕಿಲ್ಲ. ಈ ಸಂಬಂಧ ಶಿವಂ ಯಾದವ್ ಎಂಬುವವರು ಮತ್ತು ಆತನ ಸಹಚರರ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ ತಿಳಿಸಿದ್ದಾರೆ.
Saval TV on YouTube