ಗುಂಡ್ಲುಪೇಟೆ: ಅಪರಿಚಿತ ವಾಹನವೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತ ಪಟ್ಟಿರುವ ಘಟನೆ ಗುಂಡ್ಲುಪೇಟೆ-ಮೈಸೂರು ಹೆದ್ದಾರಿಯ ಮಾಡ್ರಹಳ್ಳಿ ಸಮೀಪದಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ರವೀಂದ್ರ(೩೪) ಮೃತ ವ್ಯಕ್ತಿ.
ಈತ ಬೇಗೂರಿನ ಅಂಗಡಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಎನ್ನಲಾಗುತ್ತಿದ್ದು, ಗುಂಡ್ಲುಪೇಟೆಗೆ ಕೆಲಸದ ನಿಮಿತ್ತ ಆಗಮಿಸಿ ವಾಪಸ್ ಬೈಕ್ ನಲ್ಲಿ ತೆರಳುವಾಗ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ. ಗಾಯಾಳುವನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಗುಂಡ್ಲುಪೇಟೆ ಠಾಣೆ ಪೊಲೀಸರು ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ, ಮರಣೋತ್ತರ ಪರೀಕ್ಷೆ ನಂತರ ವಾರಸುದಾರರಿಗೆ ಹಸ್ತಾಂತರ ಮಾಡಿದ್ದಾರೆ. ಇನ್ನೂ ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube