ಮೈಸೂರು: ಅಪರಿಚಿತ ವಾಹನ ಡಿಕ್ಕಿಯಾಗಿ ಖಾಸಗಿ ಸಂಸ್ಥೆ ಕೃಷಿ ಅಧಿಕಾರಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡಿನ ಹುಸ್ಕೂರು ಗ್ರಾಮದ ಬಳಿ ನಡೆದಿದೆ.
ಖಾಸಗಿ ಸಂಸ್ಥೆಯಲ್ಲಿ ಕೃಷಿ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಸುನಿಲ್(24) ಮೃತ ಪಟ್ಟ ಯುವಕ. ಹಗಿನವಾಳು ಗ್ರಾಮದ ಬಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ಸುನಿಲ್ ಸುಮಾರು 20 ಅಡಿ ದೂರ ಹಾರಿ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನಂಜನಗೂಡು ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಹಿಟ್ & ರನ್ ಕೇಸ್ ದಾಖಲಿಸಿಕೊಂಡಿದ್ದಾರೆ.