ಮನೆ ರಾಜಕೀಯ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ: ಸಚಿವ ಅಶ್ವತ್ಥನಾರಾಯಣ

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ: ಸಚಿವ ಅಶ್ವತ್ಥನಾರಾಯಣ

0

ಚಾಮರಾಜನಗರ: ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದರು.

ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ’ ಎಂದೂ ಸಚಿವರು ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಹಿಜಾಬ್-ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು’ ಎಂದರು.

ಬುಧವಾರದಿಂದ ಕಾಲೇಜುಗಳು ಆರಂಭವಾಗಲಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕಾಲೇಜುಗಳಿಗೆ ಹೊರಗಡೆಯಿಂದ ಬರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದತೆಯಿಂದ ಕಾಲೇಜುಗಳಿಗೆ ಹಾಜರಾಗಬೇಕು’ ಎಂದು ಮನವಿ ಮಾಡಿದರು.

ಹಿಂದಿನ ಲೇಖನಅಂತರರಾಷ್ಟ್ರೀಯ ಬಾಲ್ಯದ ಕ್ಯಾನ್ಸರ್ ದಿನಾಚರಣೆ
ಮುಂದಿನ ಲೇಖನಹೈಕೋರ್ಟ್​​ನಲ್ಲಿ ಹಿಜಾಬ್ ವಿವಾದ ವಿಚಾರಣೆ: ರುದ್ರಾಕ್ಷಿ, ಮೂಗುತಿ ಬಗ್ಗೆಯೂ ಗಹನ ಚರ್ಚೆ