ಮನೆ ರಾಷ್ಟ್ರೀಯ ಕೇಂದ್ರ ಬಜೆಟ್ 2023: 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ ಸ್ಥಾಪನೆ

ಕೇಂದ್ರ ಬಜೆಟ್ 2023: 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌ ಸ್ಥಾಪನೆ

0

ನವದೆಹಲಿ: ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್‌, ಹೆಲಿಪೋರ್ಟ್‌’ಗಳನ್ನು ಸ್ಥಾಪಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.

ಬುಧವಾರ 2023-24ರ ಕೇಂದ್ರ ಬಜೆಟ್ ಮಂಡನೆ ವೇಳೆ ಅವರು ಈ ಘೋಷಣೆ ಮಾಡಿದ್ದಾರೆ.

ದೇಶದಾದ್ಯಂತ ಪ್ರಾದೇಶಿಕ ಸಂಪರ್ಕವನ್ನು ಸುಧಾರಿಸುವ ಗುರಿಯನ್ನು ಹೊಂದಿರುವ ಉಡಾನ್ ಯೋಜನೆಗೆ ಈ ಕ್ರಮದಿಂದ ಮತ್ತಷ್ಟು ಉತ್ತೇಜನ ಸಿಗುವ ನಿರೀಕ್ಷೆಯಿದೆ.

ಸಂಪರ್ಕ ವ್ಯವಸ್ಥೆಯನ್ನು ಬಲಪಡಿಸಲು 50 ಹೆಚ್ಚುವರಿ ವಿಮಾನ ನಿಲ್ದಾಣಗಳು, ಏರೋಡ್ರೋಮ್‌, ಹೆಲಿಪ್ಯಾಡ್‌’ಗಳು ಮತ್ತು ಜಲ ಮಾರ್ಗಗಳನ್ನು ರೂಪಿಸಲಾಗುವುದು ಎಂದು ಸೀತಾರಾಮನ್ ಹೇಳಿದರು.

ಹಿಂದಿನ ಲೇಖನಅಮೃತಕಾಲದ ಸರ್ವಸ್ಪರ್ಶಿ ಬಜೆಟ್‌ : ಸಚಿವ ಡಾ.ಕೆ.ಸುಧಾಕರ್‌
ಮುಂದಿನ ಲೇಖನಕಾರಿನ ಮೇಲೆ ಕಾಂಕ್ರೀಟ್ ಮಿಕ್ಸರ್ ಲಾರಿ ಪಲ್ಟಿ: ಸ್ಥಳದಲ್ಲೇ ತಾಯಿ, ಮಗಳು ಸಾವು