ಮನೆ ರಾಜಕೀಯ ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ : ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ

ಹಣಕಾಸು ಸಚಿವಾಲಯಕ್ಕೆ ಆಗಮಿಸಿದ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ : ಕೆಲವೇ ಕ್ಷಣಗಳಲ್ಲಿ ಬಜೆಟ್ ಮಂಡನೆ

0

ನವದೆಹಲಿ: ಬಹುನಿರೀಕ್ಷಿತ ಕೇಂದ್ರ ಬಜೆಟ್-2022 ಮೇಲೆ ಎಲ್ಲರ ಗಮನ ಕೇಂದ್ರಿಕರಿಸಿದ್ದು, ಲೋಕಸಭೆಯಲ್ಲಿ ಇನ್ನು ಕೆಲ ಹೊತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಪೂಜೆ ಪ್ರಾರ್ಥನೆ ಸಲ್ಲಿಸಿದ ಕೇಂದ್ರ ಹಣಕಾಸು ಇಲಾಖೆ ರಾಜ್ಯ ಸಚಿವ ಭಾಗವತ್ ಕರದ್ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಆಡಳಿತಾರೂಢ ಮತ್ತು ಪ್ರತಿಪಕ್ಷಗಳ ಎಲ್ಲಾ ಸದಸ್ಯರು ಸದನದಲ್ಲಿ ಕುಳಿತು ಬಜೆಟ್ ಮಂಡನೆಯನ್ನು ಆಲಿಸುವಂತೆ ಮನವಿ ಮಾಡಿಕೊಂಡರು. ಬಜೆಟ್ ಮಂಡಿಸುವ ಹೊತ್ತಿನಲ್ಲಿ ಎಲ್ಲಾ ಸದಸ್ಯರು ಸಹಕಾರ ನೀಡುವಂತೆ ಕೇಳಿಕೊಂಡರು.

ನಂತರ ಹಣಕಾಸು ಇಲಾಖೆ ರಾಜ್ಯ ಸಚಿವರಾದ ಪಂಕಜ್ ಚೌಧರಿ ಮತ್ತು ಭಾಗವತ್ ಕರದ್ ಹಣಕಾಸು ಸಚಿವಾಲಯಕ್ಕೆ ತೆರಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಪಂಕಜ್ ಚೌಧರಿ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಯೊಂದು ಕ್ಷೇತ್ರಗಳ ಅಗತ್ಯಗಳಿಗೆ ಅನುಗುಣವಾಗಿ ಅಂತರ್ಗತ ಬಜೆಟ್ ಅನ್ನು ಮಂಡಿಸಲಿದ್ದಾರೆ. ಇದರಿಂದ ಎಲ್ಲರಿಗೂ ಅನುಕೂಲವಾಗಲಿದೆ. ಇಂದಿನ ಬಜೆಟ್‌ನಿಂದ ಎಲ್ಲಾ ವಲಯಗಳು ನಿರೀಕ್ಷೆಗಳನ್ನು ಹೊಂದಿವೆ ಎಂದರು.

ಹಿಂದಿನ ಲೇಖನಸಿಡಿ ಪ್ರಕರಣ : ಎಸ್ಐಟಿಯಿಂದ ಹೈಕೋರ್ಟ್ ಗೆ ಮಧ್ಯಂತರ ವರದಿ ಸಲ್ಲಿಕೆ
ಮುಂದಿನ ಲೇಖನಬಟ್ಟೆ ಮಳಿಗೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಲಕ್ಷಾಂತರ ಬೆಲೆಯ ಬಟ್ಟೆಗಳು ಭಸ್ಮ