ಮನೆ ಮಠ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ

ಸುತ್ತೂರು ಶ್ರೀಗಳ ಆಶೀರ್ವಾದ ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ

0

ಮೈಸೂರು(Mysuru):  ನಗರದ ಸುತ್ತೂರು ಶಾಖಾ ಮಠಕ್ಕೆ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಇಂದು ಭೇಟಿ ನೀಡಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದರು.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ಕೇಂದ್ರ ಭೂ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಮಠದ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು.

ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ  ಪಡೆದ ಕೇಂದ್ರ ಸಚಿವ ನಿತಿನ್ ಗಡ್ಕರಿ‌, ಸುತ್ತೂರು ಶ್ರೀಗಳ ಜೊತೆ ಉಭಯ ಕುಶಲೋಪರಿ ವಿಚಾರಿಸಿದರು.

ನಿತಿನ್ ಗಡ್ಕರಿ ಅವರ ಜೊತೆ  ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ‍ಉಪಸ್ಥಿತರಿದ್ದರು.

ಹಿಂದಿನ ಲೇಖನಮೊದಲ ಮಹಿಳಾ ಮೇಸ್ ಬೇರರ್ ನೇಮಕ ಮಾಡಿಕೊಂಡ ಮದ್ರಾಸ್ ಹೈಕೋರ್ಟ್
ಮುಂದಿನ ಲೇಖನಆನೇಕಲ್‌ ಪುರಸಭೆಯ ಮೂವರು ಸದಸ್ಯರ ಅನರ್ಹತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್‌, ಜೂನ್‌ 15ಕ್ಕೆ ಅಂತಿಮ ವಿಚಾರಣೆ