ಮನೆ ಉದ್ಯೋಗ ಆಧಾರ್: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಧಾರ್: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

0

ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬೆಂಗಳೂರಿನ ಯುಐಡಿಎಐಯಲ್ಲಿ 7 ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಆಫ್​ಲೈನ್​ ಮೂಲಕ ಸಲ್ಲಿಸ ಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 26 ಆಗಿದೆ.

ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆ ಭರ್ತಿಗೆ ಮುಂದಾಗಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಈ ಡೆಪ್ಯೂಟೆಶನ್​ ಆಧಾರದ ಮೇಲೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ಆಯ್ಕೆ, ನೇಮಕಾತಿ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ.

ಸಂಸ್ಥೆಯ ಹೆಸರು: ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಹುದ್ದೆಯ ಹೆಸರು: ಸೆಕ್ಷನ್ ಆಫೀಸರ್, ಖಾಸಗಿ ಕಾರ್ಯದರ್ಶಿ
ಹುದ್ದೆಗಳ ಸಂಖ್ಯೆ: 7
ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
ವೇತನ: ಯುಐಡಿಎಐ ನಿಯಮಗಳ ಪ್ರಕಾರ

ಅನುಭವ:
ವಿಭಾಗೀಯ ಅಧಿಕಾರಿ, ಸಹಾಯಕ ವಿಭಾಗೀಯ ಆಫೀಸರ್: ಅಭ್ಯರ್ಥಿಗಳು ಆಡಳಿತ, ಕಾನೂನು, ಮಾನವ ಸಂಪನ್ಮೂಲಕ, ಖಾತೆ, ಆಯವ್ಯಯ, ಇ-ಆಡಳಿತ ಇತ್ಯಾದಿಗಳಲ್ಲಿ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10 ಆಗಸ್ಟ್​​ 2022
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 26 ಸೆಪ್ಟೆಂಬರ್​ 2022

ಅಧಿಕೃತ ವೆಬ್‌ಸೈಟ್: uidai.gov.in

ಅರ್ಜಿ ಸಲ್ಲಿಕೆ ವಿಳಾಸ
ನಿರ್ದೇಶಕರು (ಎಚ್​ಆರ್​​), ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ, ಪ್ರಾದೇಶಿಕ ಕಚೇರಿ, 3ನೇ ಮಹಡಿ, ದಕ್ಷಿಣ ಭಾಗ, ಖನಿಜ ಭವನ, ನಂ. 49, ರೇಸ್ ಕೋರ್ಸ್ ರಸ್ತೆ, ಬೆಂಗಳೂರು-560001.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ನೇಮಕಾತಿ ಅಧಿಸೂಚನೆ ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ರೆಸ್ಯೂಮೆ ಜೊತೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.
ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಮೇಲಿನ ​ ವಿಳಾಸಕ್ಕೆ ನಿಗದಿತ ದಿನಾಂಕದ ಮುನ್ನ ಕಳುಹಿಸಬೇಕು.