ಮನೆ ಅಪರಾಧ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

0

ಕುಷ್ಟಗಿ: ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಡರಾತ್ರಿ ನಡೆದಿದೆ.

Join Our Whatsapp Group

ಮುತ್ತಣ್ಣ ಈರಪ್ಪ ಸಾಹುಕಾರ (28) ಮೃತ ದುರ್ದೈವಿ.

ಯಲಬುರ್ಗಾ ತಾಲೂಕಿನ ಗುನ್ನಾಳ ಗ್ರಾಮದ ಯುವಕ, ಹಾವೇರಿಯ ಗ್ರಾಮೀಣ ಬ್ಯಾಂಕ್‌ ನಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ. ಮೇ 7 ರಂದು ನಡೆಯುವ ಲೋಕಸಭಾ ಚುನಾವಣೆಗೆ ಮತ ಚಲಾಯಿಸಲು ಹಾವೇರಿಯಿಂದ ಗುನ್ನಾಳ ಗ್ರಾಮಕ್ಕೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

ಅಪರಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ನಜ್ಜು ಗುಜ್ಜಾಗಿದೆ. ಮೃತ ಶರೀರವನ್ನು ಮಂಗಳವಾರ ಬೆಳಗ್ಗೆ ಕುಷ್ಟಗಿ ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.