ಮೈಸೂರು : ಮಾನಸಗಂಗೋತ್ರಿ ವ್ಯಾಪ್ತಿಯಲ್ಲಿರುವ ಕುಕ್ಕರಹಳ್ಳಿ ಕೆರೆಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.
ಇಂದು ಬೆಳಗ್ಗೆ ಸ್ಥಳೀಯರು ಕುಕ್ಕರಹಳ್ಳಿ ಕೆರೆಗೆ ವಾಯುವಿಹಾರಕ್ಕೆ ಹೋಗಿದ್ದಾಗ ಬೋಟ್ ನಿಲುಗಡೆ ಸ್ಥಳದಲ್ಲಿ ಮೃತದೇಹ ತೇಲುತ್ತಿರುವುದನ್ನ ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಈ ಸಂಬಂಧ ಸ್ಥಳಕ್ಕೆ ಸರಸ್ವತಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದರೋ ಅಥವಾ ಕೊಲೆ ಮಾಡಿ ಇಲ್ಲಿಗೆ ತಂದು ಹಾಕಿದ್ದಾರೋ ಎಂಬುದು ತನಿಖೆ ನಂತರ ತಿಳಿಯಲಿದೆ.














