ಮನೆ ಅಪರಾಧ ಕೆಆರ್​ಐಡಿಎಲ್ ನಿಂದ ಪಾವತಿಯಾಗದ ಬಿಲ್: ಗುತ್ತಿಗೆದಾರ ನೇಣಿಗೆ ಶರಣು

ಕೆಆರ್​ಐಡಿಎಲ್ ನಿಂದ ಪಾವತಿಯಾಗದ ಬಿಲ್: ಗುತ್ತಿಗೆದಾರ ನೇಣಿಗೆ ಶರಣು

0

ವಣಗೆರೆ: ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ನಿಂದ 2023-24ನೇ ಸಾಲಿನ ಬಾಕಿ ಬಿಲ್​ ಪಾವತಿಯಾಗದ ಹಿನ್ನೆಲೆಯಲ್ಲಿ ಮನನೊಂದ ಸಂತೇಬೆನ್ನೂರಿನ ಗುತ್ತಿಗೆದಾರ ಪಿ.ಎಸ್ ಗೌಡರ್ (48) ಡೆತ್​ನೋಟ್​ ಬರೆದಿಟ್ಟು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Join Our Whatsapp Group

ಗುತ್ತಿಗೆದಾರ ಪಿ.ಎಸ್ ಗೌಡರ್ ಚನ್ನಗಿರಿ ತಾಲೂಕಿನ ಸಂತೆಬೆನ್ನೂರಿನಲ್ಲಿ ವಾಸಿಸುತ್ತಿದ್ದರು. ಸಂತೇಬೆನ್ನೂರಿನ ಕೃಷಿ ಇಲಾಖೆ ಆವರಣದಲ್ಲಿ 2023-24ರಲ್ಲಿ ನಡೆದ ಕಾಮಗಾರಿಗೆ ಸಂಬಂಧಿಸಿದ ಹಣ ಬಿಡುಗಡೆ ಮಾಡದೆ ಕೆಆರ್​ಡಿಎಲ್ ಅಧಿಕಾರಿಗಳು ಸತಾಯಿಸುತ್ತಿದ್ದರು. ಅಲ್ಲದೆ ಇವರ ಇಬ್ಬರು ಸಹೋದರರು ಹಣಕಾಸು ವಿಚಾರವಾಗಿ ಮೋಸಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಅಧಿಕಾರಿಗಳ ಧೋರಣೆ ಮತ್ತು ಸಹೋದರರ ವರ್ತನೆಯಿಂದ ಬೇಸತ್ತು ತಮ್ಮ ಮನೆಯಲ್ಲಿ ಮೇ26 ರಂದು ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಆರ್​ಐಡಿಎಲ್ ದೊಡ್ಡ ಮೊತ್ತದ ಪರಿಹಾರ ನೀಡಬೇಕೆಂದು ಡೆತ್ ​ನೋಟ್​ ನಲ್ಲಿ ಬರೆದಿದ್ದಾರೆ.

ಪಿಎಸ್ ಗೌಡರ್ ಪತ್ನಿ ವಸಂತ ಕುಮಾರಿಯವರಿಂದ ಸಂತೇಬೆನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಂತೇಬೆನ್ನೂರಿನ ಪೊಲೀಸ್ ಠಾಣೆಯಲ್ಲಿ 306 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ ಮಾತನಾಡಿ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಸಹೋದರರಾದ ಶ್ರೀನಿವಾಸ ಹಾಗೂ ನಾಗರಾಜ್ ಅವರ ಬಗ್ಗೆ ಬರೆದಿದ್ದಾರೆ. ಜೊತೆಗೆ ಇವರು ಗುತ್ತಿಗೆದಾರ ಸಹ ಆಗಿದ್ದ ಇವರಿಗೆ ಹಣ ಬರಬೇಕಿತ್ತು. ಸಹೋದರ ತೊಂದರೆ ಹಾಗೂ ಬರಬೇಕಾದ ಒಟ್ಟು ಎಂಬತ್ತು ಲಕ್ಷ ಹಣ ಬರಬೇಕಿತ್ತು. ಈ ಎಲ್ಲ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ಇದೇ ಕಾರಣಕ್ಕೆ ಸಂಬಂಧಿಸಿ ಪಿಎಸ್ ಗೌಡರ ಸಹೋದರರಾದ ನಾಗರಾಜ್, ಶ್ರೀನಿವಾಸ ಹಾಗೂ ಕೆಆರ್​ಐಡಿಎಲ್ ಸೇರಿಸಿ ಸಂತೆ ಬೆನ್ನೂರ ಪೊಲೀಸ ಠಾಣೆಯಲ್ಲಿ ಐಪಿಸಿ ಕಲಂ 306 ಅನೈಯ ಕೇಸ್ ಬುಕ್ ಮಾಡಲಾಗಿದೆ ಎಂದು ಹೇಳಿದರು.