ಮನೆ ರಾಜಕೀಯ ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ: ಸಿಎಂ ಬೊಮ್ಮಾಯಿ

ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಸ್ಪಂದನೆ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸ್ಪಂದನೆ ದೊರಕಿದೆ.‌ ಇದು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ‘ಜನಸ್ಪಂದನ’ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಗಳನ್ನು ಜನರ ಮುಂದಿಟ್ಟಿದ್ದಾರೆ.

ಸಮಾಜದ ಎಲ್ಲಾ ವರ್ಗಗಳಿಗೂ ಅವಕಾಶ ನೀಡುವ ಮೂಲಕ ಎಲ್ಲರೂ ಅಭಿವೃದ್ಧಿಯಾಗ ಬೇಕೆಂಬುದೇ ನಮ್ಮ ಸರ್ಕಾರದ ಆಶಯವಾಗಿದೆ ಎಂದರು.

ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಕೋವಿಡ್ ಸಂದರ್ಭದಲ್ಲಿ ಅಲ್ಲಿನ ಪರಿಸ್ಥಿತಿ ಬಹಳ ಕೆಟ್ಟದಾಗಿತ್ತು. ಆದರೆ, ಕರ್ನಾಟಕದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಆಗಿನ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸಮರ್ಥವಾಗಿ ನಿಭಾಯಿಸಿದ್ದರು ಎಂದು ಬೊಮ್ಮಾಯಿ ಮೆಚ್ಚುಗೆ ವ್ಯಕ್ತಪಡಿಸಿದರು.

ಅನ್ನಭಾಗ್ಯಕ್ಕೆ ಕನ್ನ ಹಾಕಿದ ಸಿದ್ದರಾಮಯ್ಯ: ಅನ್ನಭಾಗ್ಯದ ಅವ್ಯವಹಾರ ತನಿಖೆ ನಡೆಸುತ್ತಿದ್ದ ಅನುರಾಗ್ ತಿವಾರಿ ಅವರು ಉತ್ತರ ಪ್ರದೇಶದಲ್ಲಿ ಅನುಮಾನಾಸ್ಪದವಾಗಿ ಸಾವೀಗಿಡಾದರು. ಈ ರೀತಿಯ ಆಡಳಿತದ ಪಾರದರ್ಶಕತೆ ಮತ್ತು ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯ ಅವರಿಗೆ ಸಲ್ಲುತ್ತದೆ.

ಹೊಸ ಯೋಜನೆಗಳ ಘೋಷಣೆ

ಇದೇ ವೇಳೆ 2023ರ ವಿಧಾನಸಭಾ ಚುನಾವಣೆಗೆ ಪಕ್ಷವನ್ನು ಅಣಿಗೊಳಿಸುವ ಆಶಯದಿಂದ ಹೊಸ ಯೋಜನೆಗಳನ್ನು ಘೋಷಿಸಿದರು.

* ನೆಲಮಂಗಲ, ದೊಡ್ಡಬಳ್ಳಾಪುರ, ದೇವನಹಳ್ಳಿನಗರಗಳನ್ನು ಸ್ಯಾಟಲೈಟ್ ಟೌನ್‌ಗಳಾಗಿ ಅಭಿವೃದ್ಧಿಪಡಿಸಲಾಗುವುದು.

*ಹಾಲು ಉತ್ಪಾದಕರಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್ , ಎಸ್‌ಸಿ, ಎಸ್‌ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ಯೋಜನೆ.

*ರೈತರ ವ್ಯವಸಾಯಕ್ಕೆ ಅನುಕೂಲವಾಗಲು, ಹಾಗೂ ವೆಚ್ಚ ಕಡಿತವಾಗಲು ‘ರೈತ ಶಕ್ತಿ’ ಯೋಜನೆ ಅನುಷ್ಠಾನ.

* ರಾಜ್ಯದ ಮಾವು ಬೆಳೆಗಾರರಿಗೆ ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಮಾರುಕಟ್ಟೆ ವ್ಯವಸ್ಥೆಯನ್ನು ಒದಗಿಸಲು ಅಗತ್ಯ ಕ್ರಮ.

* ಮೀನುಗಾರಿಕೆಯನ್ನು ಉತ್ತೇಜಿಸಲು, ಮೀನುಗಾರಿಕಾ ಮಹಿಳೆಯರಿಗೆ ಅಲ್ಪಾವಧಿ ಸಾಲ ವಿತರಿಸಲು ಕ್ರಮ.