ಮನೆ ರಾಷ್ಟ್ರೀಯ ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಬಿಎಸ್‌ ಎಫ್‌ ಯೋಧನಿಗೆ ಗಾಯ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಓರ್ವ ಬಿಎಸ್‌ ಎಫ್‌ ಯೋಧನಿಗೆ ಗಾಯ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್‌ ನ ಅಂತರರಾಷ್ಟ್ರೀಯ ಗಡಿಯಲ್ಲಿ ಗುರುವಾರ ಮುಂಜಾನೆ ‍‍‍ಪಾಕಿಸ್ತಾನ ಸೇನಾಪಡೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ  ಓರ್ವ ಬಿಎಸ್‌ ಎಫ್‌ ಯೋಧ ಗಾಯೊಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.

ಗಡಿ ಔಟ್‌ ಪೋಸ್ಟ್‌ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನಾಪಡೆ ದಾಳಿ ನಡೆಸಿದ್ದು, 24 ದಿನಗಳ ಅಂತರದಲ್ಲಿ ಇದು ಮೂರನೇ ಕದನ ವಿರಾಮ ಉಲ್ಲಂಘನೆಯಾಗಿದೆ.

ಗಾಯಗೊಂಡಿರುವ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜಮ್ಮುವಿನಲ್ಲಿರುವ ಜಿಎಂಸಿ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

ಪಾಕಿಸ್ತಾನ ರೇಂಜರ್ಸ್‌ನ ಈ ಅಪ್ರಚೋದತ ದಾಳಿಗೆ ಬಿಎಸ್‌ ಎಫ್‌ ಯೋಧರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಬಿಎಸ್‌ಎಫ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಹಿಂದಿನ ಲೇಖನನಮ್ಮ ಸರ್ಕಾರ ಬಡವರಿಗೆ 4 ಕೋಟಿ ಪಕ್ಕಾ ಮನೆಗಳನ್ನು ನಿರ್ಮಿಸಿಕೊಟ್ಟಿದೆ: ಪ್ರಧಾನಿ ಮೋದಿ
ಮುಂದಿನ ಲೇಖನಕಾರ್ಮಿಕರ ಮಕ್ಕಳು ಯಾವುದೇ ಕಾರಣಕ್ಕೂ ಶಿಕ್ಷಣದಿಂದ ವಂಚಿತರಾಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ