ಮನೆ ಸುದ್ದಿ ಜಾಲ ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ಎಫ್‌ಎಸ್‌ಎಸ್‌ಎಐ ನೋಟಿಸ್

ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ಪೂರೈಕೆ: ಇಂಡಿಗೋಗೆ ಎಫ್‌ಎಸ್‌ಎಸ್‌ಎಐ ನೋಟಿಸ್

0

ನವದೆಹಲಿ: ವಿಮಾನದಲ್ಲಿ ಪ್ರಯಾಣಿಕರೊಬ್ಬರಿಗೆ ಅಸುರಕ್ಷಿತ ಆಹಾರವನ್ನು ನೀಡಿದ್ದಕ್ಕಾಗಿ ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆ ಇಂಡಿಗೋಗೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್‌ಎಸ್‌ಎಸ್‌ಎಐ)  ಶೋಕಾಸ್ ನೋಟಿಸ್ ನೀಡಿದೆ.

ವಿಮಾನದಲ್ಲಿ ನೀಡಲಾದ ಸ್ಯಾಂಡ್‌ವಿಚ್‌ನಲ್ಲಿ ಹುಳು ಕಂಡುಬಂದ ಕೆಲವು ದಿನಗಳ ನಂತರ ಪ್ರಾಧಿಕಾರ ಈ ಕ್ರಮ ಕೈಗೊಂಡಿದೆ. ಬುಧವಾರ ಏರ್‌ಲೈನ್ ಶೋಕಾಸ್ ನೋಟಿಸ್ ಸ್ವೀಕರಿಸಿದ್ದು, ಪ್ರೋಟೋಕಾಲ್ ಪ್ರಕಾರ ಪ್ರತಿಕ್ರಿಯೆ ನೀಡುವುದಾಗಿ ಹೇಳಿದೆ.

ಡಿಸೆಂಬರ್ 29 ರಂದು ದೆಹಲಿಯಿಂದ ಮುಂಬೈಗೆ ತೆರಳುತ್ತಿದ್ದ 6E 6107 ವಿಮಾನದಲ್ಲಿ ಈ ಘಟನೆ ನಡೆದಿತ್ತು. ಪ್ರಯಾಣಿಕರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊವನ್ನು ಹಂಚಿಕೊಂಡ ನಂತರ ವಿಮಾನಯಾನ ಸಂಸ್ಥೆ ಕ್ಷಮೆಯಾಚಿಸಿದೆ.

ವಿಮಾನದಲ್ಲಿ ಪ್ರಯಾಣಿಕರಿಗೆ ಅಸುರಕ್ಷಿತ ಆಹಾರ ನೀಡುವುದಕ್ಕಾಗಿ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಕಾಯ್ದೆಯ ಪ್ರಕಾರ  ಪರವಾನಗಿಯನ್ನು ಅಮಾನತುಗೊಳಿಸಲು ಅಥವಾ ರದ್ದುಗೊಳಿಸಲು ಏಕೆ ಪರಿಗಣಿಸಬಾರದು ಎಂದು ಜನವರಿ 2 ರಂದು ನೀಡಲಾಗಿರುವ ನೋಟಿಸ್ ನಲ್ಲಿ ಹೇಳಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಲು ವಿಮಾನಯಾನ ಸಂಸ್ಥೆಗೆ ಏಳು ದಿನಗಳ ಕಾಲಾವಕಾಶ ನೀಡಲಾಗಿದೆ.