ಲಖನೌ(ಉತ್ತರಪ್ರದೇಶ): ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ಎದುರಿಸಲು ಕಾಂಗ್ರೆಸ್ ಭಾರೀ ಸಿದ್ದತೆ ಕೈಗೊಂಡಿದ್ದು, ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಸುಮಾರು 41 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎರಡನೇ ಪಟ್ಟಿಯಲ್ಲಿ 16 ಮಹಿಳಾ ಅಭ್ಯರ್ಥಿಗಳಿದ್ದಾರೆ. ಕೆಲವು ದಿನಗಳ ಹಿಂದೆ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 125 ಅಭ್ಯರ್ಥಿಗಳನ್ನು ಘೋಷಿಸಿದ್ದು, ಅದರಲ್ಲಿ 50 ಮಹಿಳಾ ಅಭ್ಯರ್ಥಿಗಳಿದ್ದರು.ಈ ಮೊದಲು ಉತ್ತರ ಪ್ರದೇಶದಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡಾ 40ರಷ್ಟು ಕ್ಷೇತ್ರಗಳನ್ನು ನೀಡುವುದಾಗಿ ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಹೆಚ್ಚಿನ ಕ್ಷೇತ್ರಗಳನ್ನು ನೀಡುತ್ತಿದೆ.
Advertisement

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯು ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ನಡೆಯಲಿದ್ದು, ಮಾರ್ಚ್ 7ರಂದು ಕೊನೆಗೊಳ್ಳಲಿದೆ. ಮಾರ್ಚ್ 10ರಂದು ಚುನಾವಣೆಯ ಫಲಿತಾಂಶ ಹೊರಬೀಳಲಿದೆ.