ಮನೆ ಅಪರಾಧ ಪೂಜೆ ವೇಳೆ ಗಲಾಟೆ; ಮೂವರಿಗೆ ಗುಂಡೇಟು

ಪೂಜೆ ವೇಳೆ ಗಲಾಟೆ; ಮೂವರಿಗೆ ಗುಂಡೇಟು

0

ಕೊಡಗು(Kodagu): ಕೋಲಾ ಪೂಜೆ ವೇಳೆ ನಡೆದ ಗಲಾಟೆಯಲ್ಲಿ ಮೂವರಿಗೆ ಗುಂಡೇಟು(Gun Fire) ತಗುಲಿುವ ಘಟನೆ ಕೊಡಗಿನ ಸೋಮವಾರ ಪೇಟೆ ತಾಲ್ಲೂಕಿನಲ್ಲಿ ನಡೆದಿದೆ.

ನಗರಳ್ಳಿ ಗ್ರಾಮದಲ್ಲಿ ಐದು ಕುಟುಂಬಸ್ಥರು ಸೇರಿ ನಡೆಸುವ ಕೋಲಾ ಪೂಜೆಯ ವೇಳೆ ಕುಟುಂಬಸ್ಥರ ನಡುವೆಯೇ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬರು ರಿವಾಲ್ವಾರ್‌ನಿಂದ ಗುಂಡು ಹಾರಿಸಿದ್ದು, ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಗ್ರಾಮದಲ್ಲಿ 12 ವರ್ಷಗಳ ಬಳಿಕ ಗ್ರಾಮದಲ್ಲಿ ಈ ಕೋಲಾ ಪೂಜೆ ಆಯೋಜಿಸಲಾಗಿತ್ತು. ಪೂಜೆಯ ವೇಳೆ ನಡೆದ ಗಲಾಟೆಯಲ್ಲಿ ಕೆಲವರು ವೀರೇಶ್ ಎಂಬುವರ ಮೇಲೆ ಹಲ್ಲೆ ಮಾಡಿದರು ಎನ್ನಲಾಗಿದೆ. ಆಗ ವೀರೇಶ್‌ ಹಾರಿಸಿದ ಗುಂಡೇಟಿಗೆ ಕುಟುಂಬದ ಮಹೇಶ್, ನಂದೀಶ್, ಚಂದ್ರಶೇಖರ್ ಎಂಬುವವರು ಗಾಯಗೊಂಡಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಮಹೇಶ್ ಅವರಿಗೆ ಸೊಂಟದ ಕೆಳಭಾಗಕ್ಕೆ ಗುಂಡೇಟು ತಗುಲಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಮತ್ತಿಬ್ಬರ ಕೈಗೆ ಗುಂಡೇಟು ತಗುಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಂಡು ಹಾರಿಸಿದ ವ್ಯಕ್ತಿಯ ಮೇಲೂ ಹಲ್ಲೆಯ ಗಾಯಗಳಾಗಿವೆ. 

ಪ್ರಸ್ತುತ ಗುಂಡೇಟು ತಗುಲಿದ ಮೂವರನ್ನೂ ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. 

ಘಟನೆ ಸಂಬಂಧ ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಕೊನಾರ್ಕ್‌ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ಐವರ ಸಾವು
ಮುಂದಿನ ಲೇಖನಚಾಮುಂಡಿ ಬೆಟ್ಟದಲ್ಲಿ ಈಶ್ವರಪ್ಪ, ಹೆಚ್ ಡಿ ಕುಮಾರಸ್ವಾಮಿ ಮುಖಾಮುಖಿ