ಮನೆ ಉದ್ಯೋಗ ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಕೇಂದ್ರ ಲೋಕ ಸೇವಾ ಆಯೋಗದಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಗೃಹ ವ್ಯವಹಾರಗಳು ಮತ್ತು ಇತರ ಸಚಿವಾಲಯಗಳಲ್ಲಿ ಜಾರಿ ನಿರ್ದೇಶಕ ಅಧಿಕಾರಿ ಸೈಂಟಿಸ್ಟ್​ ಬಿ ಹುದ್ದೆಗೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಒಟ್ಟು 54 ಹುದ್ದೆಗಳ ಭರ್ತಿಗೆ ಮುಂದಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 29 ಆಗಿದೆ.

ಸಂಸ್ಥೆಯ ಹೆಸರು: ಕೇಂದ್ರ ಲೋಕಸೇವಾ ಆಯೋಗ (UPSC)
ಹುದ್ದೆಯ ಹೆಸರು: ಕಾರ್ಮಿಕ ಜಾರಿ ಅಧಿಕಾರಿ, ಸೈಂಟಿಸ್ಟ್-ಬಿ
ಹುದ್ದೆಗಳ ಸಂಖ್ಯೆ: 54
ಉದ್ಯೋಗ ಸ್ಥಳ: ಕೊಚ್ಚಿ – ನವದೆಹಲಿ – ಕಾಮೃಪ್ – ಅಖಿಲ ಭಾರತ
ವೇತನ: ಕೇಂದ್ರ ಲೋಕ ಸೇವಾ ಆಯೋಗ ನಿಯಮಗಳ ಪ್ರಕಾರ

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು: 03 ವರ್ಷಗಳು
ಪ.ಜಾ, ಪ. ಪಂ ಅಭ್ಯರ್ಥಿಗಳು: 05 ವರ್ಷಗಳು
ವಿಕಲಚೇತನ ಅಭ್ಯರ್ಥಿಗಳು: 10 ವರ್ಷಗಳು
ಅರ್ಜಿ ಶುಲ್ಕ:
ಪ.ಪಂ, ಪ.ಜಾ, ವಿಕಲಚೇತನ ಮತ್ತು ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ
ಸಾಮಾನ್ಯ, ಒಬಿಸಿ ಅಭ್ಯರ್ಥಿಗಳು: 25 ರೂ

ಪಾವತಿ ವಿಧಾನ: ಆನ್‌ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಪ್ರಮುಖ ದಿನಾಂಕ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 12 ಸೆಪ್ಟೆಂಬರ್​​ 2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 29 ಸೆಪ್ಟೆಂಬರ್​​ 2022

ಅಧಿಕೃತ ವೆಬ್‌ಸೈಟ್: upsc.gov.in
ಅರ್ಜಿ ಸಲ್ಲಿಕೆ ವಿಧಾನ

ನೇಮಕಾತಿ ಅಧಿಸೂಚನೆ 2022 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ.

ಅಧಿಕೃತ ವೆಬ್​ಸೈಟ್​ ಮೂಲಕ ಅರ್ಜಿ ನಮೂನೆಯನ್ನು ಡೌನ್​ಲೋಡ್​ ಮಾಡಿ ಸ್ವಯಂ ದೃಢೀಕರಿಸಿದ ಅರ್ಜಿಗಳನ್ನು ಲಗತ್ತಿಸಿ

ಅರ್ಜಿಜೊತೆಗೆ ದಯವಿಟ್ಟು ಸಂವಹನ ಉದ್ದೇಶಕ್ಕಾಗಿ ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು, ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಅನುಭವಗಳನ್ನು ಅರ್ಜಿ ಜೊತೆ ಲಗತ್ತಿಸಿ.

ನಿಮ್ಮ ವರ್ಗಕ್ಕೆ ಅನುಗುಣವಾಗಿ ಅರ್ಜಿ ಶುಲ್ಕವನ್ನು ಪಾವತಿಸಿ.

ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಿದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ. ನಂತರ ಸಲ್ಲಿಸು ಬಟನ್ ಅನ್ನು ಕ್ಲಿಕ್ ಮಾಡಿ.

ಹಿಂದಿನ ಲೇಖನಪಿತೃ ಪಕ್ಷ: ಈ ಅವಧಿಯು ಯಾವ ರಾಶಿಗೆ ಶುಭ..? ಯಾರಿಗೆ ಅಶುಭ ?
ಮುಂದಿನ ಲೇಖನರಾಜ್ಯದಲ್ಲಿ ಮಳೆ, ಪ್ರವಾಹದಿಂದ ಹಾನಿ: ವಿಧಾನಸಭೆಯಲ್ಲಿಂದು ಚರ್ಚೆ