ಮನೆ ಸುದ್ದಿ ಜಾಲ ಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ

ಆಯುಧ ಪೂಜೆ ವೇಳೆ ರಾಸಾಯನಿಕಯುಕ್ತ ಬಣ್ಣಗಳ ಬಳಕೆ ನಿಷೇಧ

0

ಬೆಂಗಳೂರು(Bengaluru): ಆಯುಧಪೂಜೆ ವೇಳೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡುವ ವೇಳೆ ರಾಸಾಯನಿಕಯುಕ್ತ ಬಣ್ಣಗಳನ್ನು ಬಳಕೆ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ಆಯುಧಪೂಜೆ ನೆರವೇರಿಸುವಾಗ ಕಚೇರಿಯ ಒಳಗೆ, ಕಾರಿಡಾರ್’ಗಳಲ್ಲಿ ಕುಂಬಳಕಾಯಿ ಮತ್ತು ರಂಗೋಲಿಯಲ್ಲಿ ಯಾವುದೇ ರೀತಿಯ ರಾಸಾಯನಿಕ ಮಿಶ್ರಿತ ಬಣ್ಣವನ್ನು ಕಡ್ಡಾಯವಾಗಿ ಬಳಕೆ ಮಾಡಬಾರದು. ಪೂಜಾ ದಿನದಂದು ಕಚೇರಿಯಿಂದ ಹೊರಡುವ ಮುನ್ನ ದೀಪಗಳನ್ನು ಮತ್ತು ವಿದ್ಯುತ್ ಸ್ವಿಚ್’ಗಳನ್ನು ತಪ್ಪದೇ ನಂದಿಸಿ ತೆರಳಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಪಾರಂಪರಿಕ ಕಟ್ಟಡದ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಅಧಿಕಾರಿ/ಸಿಬ್ಬಂದಿಯ ಕರ್ತವ್ಯವಾಗಿದೆ. ಪ್ರತಿಯೊಬ್ಬರು ರಾಸಾಯನಿಕಯುಕ್ತ ಬಣ್ಣಗಳನ್ನು ಬಳಕೆ ಮಾಡದ ಸೂಚನೆಯನ್ನು ಪಾಲಿಸಬೇಕು. ಒಂದು ವೇಳೆ ಈ ಬಗ್ಗೆ ಕ್ರಮ ವಹಿಸದಿದ್ದರೆ ಸಂಬಂಧಪಟ್ಟ ಶಾಖೆಯವರ ಮೇಲೆ ಅನಿವಾರ್ಯವಾಗಿ ಜವಾಬ್ದಾರಿಯನ್ನು ನಿಗದಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.