ಮನೆ ಅಪರಾಧ ಆಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರನ್ನು ಬಂಧಿಸಿದ ಪೊಲೀಸರು

ಆಕ್ರಮ ಬಡ್ಡಿ ವ್ಯವಹಾರ: 25 ದಂಧೆಕೋರರನ್ನು ಬಂಧಿಸಿದ ಪೊಲೀಸರು

0

ಹುಬ್ಬಳ್ಳಿ: ಅಕ್ರಮ ಬಡ್ಡಿ ವ್ಯವಹಾರದಲ್ಲಿ ತೊಡಗಿರುವ ಕುಳಗಳಿಗೆ ಮಹಾನಗರ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೀಟರ್ ಬಡ್ಡಿ ವ್ಯವಹಾರದಲ್ಲಿ ತೊಡಗಿದ್ದ 25 ದಂಧೆಕೋರರನ್ನು ಬಂಧಿಸಿದ್ದಾರೆ.

Join Our Whatsapp Group

ಇತ್ತೀಚೆಗೆ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ ಅವರು ವಿವಿಧ ಪ್ರದೇಶಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಾರ್ವಜನಿಕರು ಮೀಟರ್ ಬಡ್ಡಿ ಹಾವಳಿಯ ಬಗ್ಗೆ ನೋವು ತೋಡಿಕೊಂಡಿದ್ದರು. ಇದನ್ನು ಗಂಭೀರವಾಗಿ ತಗೆದುಕೊಂಡ ಪೊಲೀಸರು ತಮ್ಮ ಠಾಣೆ ವ್ಯಾಪ್ತಿಯಲ್ಲಿ ಮೀಟರ್ ಬಡ್ಡಿ ದಂಧೆಕೋರರ ಪತ್ತೆಗೆ ಮುಂದಾಗಿದ್ದರು. ಈ ಕುರಿತು ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಹುಬ್ಬಳ್ಳಿ, ಧಾರವಾಡ ಸೇರಿದಂತೆ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ 7 ಪ್ರಕರಣ ದಾಖಲಿಸಿ 25 ಜನರನ್ನು ಬಂಧಿಸಿದ್ದಾರೆ.

ಧಾರವಾಡದ ಉಪನಗರ ಠಾಣೆ-2, ಶಹರ ಠಾಣೆ-2, ಪ್ರಕರಣ ವಿದ್ಯಾನಗರ ಠಾಣೆ-2 ಹಾಗೂ ಹುಬ್ಬಳ್ಳಿ ಬೆಂಡಿಗೇರಿ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿವೆ. ಬಂಧಿತರಿಂದ 10 ದ್ವಿಚಕ್ರ ವಾಹನಗಳು, 10 ಮೊಬೈಲ್, ಹರಿತವಾದ ಆಯುಧ, ಮೀಟರ್ ಬಡ್ಡಿ ದಂಧೆಯ ವಿವರ ನಮೋದಿಸಿದ ದಾಖಲೆಗಳು, ಬಾಂಡ್ ಗಳನ್ನು ಜಪ್ತು ಮಾಡಲಾಗಿದೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಆರಂಭಿಕ ಹಂತದಲ್ಲಿ ಇಷ್ಟು ಪ್ರಕರಣಗಳನ್ನು ದಾಖಲಿಸಿ ದಂಧೆಯಲ್ಲಿ ತೊಡಗಿರುವ ಬಗ್ಗೆ ಸೂಕ್ತ ದಾಖಲೆಗಳು ದೊರೆತ ಹಿನ್ನೆಲೆಯಲ್ಲಿ 25 ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರು ಯಾವುದಾದರೂ ಮೀಟರ್ ಬಡ್ಡಿ ದಂಧೆಗೆ ಸಿಲುಕಿದ್ದರೆ ಸೂಕ್ತ ದಾಖಲೆಗಳೊಂದಿಗೆ ನಿಮ್ಮ ಹತ್ತಿರದ ಠಾಣೆಯಲ್ಲಿ ಪ್ರಕರಣ ದಾಖಲಿಸಬಹುದು ಎಂದು ತಿಳಿಸಿದರು.