ಉತ್ತರ ಪ್ರದೇಶ: ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.
ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿರುವುದು ಕಂಡುಬಂದಿದ್ದು, ಸ್ಥಳದಲ್ಲಿ ಹಲವಾರು ಕಲ್ಲಂಗಡಿಗಳು ಮತ್ತು ಬೆಲ್ಲದ ತುಂಡುಗಳು ಕಂಡುಬಂದಿದ್ದರಿಂದ ಮಂಗಗಳು ವಿಷವುಂಡು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ.
ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಅವರ ಸಾವಿಗೆ ಕಾರಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಗಳ ಮೃತದೇಹಗಳನ್ನು ಶವಪರೀಕ್ಷೆಗಾಗಿ ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.














