ಉತ್ತರ ಪ್ರದೇಶ: ಪರಿಚಯಸ್ಥರಿಂದಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್’ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಬಿಜ್ನೋರ್ ನಲ್ಲಿ ಮಹಿಳೆಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳನ್ನು ಶಂಕಿ, ರಾಬಿನ್ ಮತ್ತು ಅಂಕಿತ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆರೋಪಿಗಳು ಮಹಿಳೆ (24) ಅವರನ್ನು ತಮ್ಮ ಕಾರಿನಲ್ಲಿ ಕರೆದೊಯ್ದು ಕೊಳವೆ ಬಾವಿ ಕಾಂಪೌಂಡ್ ಬಳಿ ಅತ್ಯಾಚಾರವೆಸಗಿದ ಘಟನೆ ಶುಕ್ರವಾರ ಸಂಭವಿಸಿದೆ. ತನ್ನ ದೂರಿನಲ್ಲಿ ಸಂತ್ರಸ್ತೆ ಪೊಲೀಸರ ಬಳಿ ಆರೋಪಿಗಳನ್ನು ತಿಳಿದಿರುವುದಾಗಿ ಹೇಳಿದ್ದಾಗಿ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜೀವ್ ವಾಜಪೇಯಿ ತಿಳಿಸಿದ್ದಾರೆ.
ಶನಿವಾರ ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 ಡಿ (ಗ್ಯಾಂಗ್ ರೇಪ್) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ನಗರ) ಸಂಜೀವ್ ವಾಜಪೇಯಿ ತಿಳಿಸಿದ್ದಾರೆ.
ಆರೋಪಿಗಳನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.