ಮಂಗಳೂರಿನ ಸುರತ್ಕಲ್ನಲ್ಲಿರುವ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 14 ತಾತ್ಕಾಲಿಕ ಫ್ಯಾಕಲ್ಟಿ ಹುದ್ದೆಗೆ ನೇಮಕಾತಿ ಆದೇಶ ಹೊರಡಿಸಲಾಗಿದೆ. ಈ ಹುದ್ದೆಯನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ಆಗಸ್ಟ್ 17ರಂದು ಸಂಸ್ಥೆಯಲ್ಲಿ ನೇರ ಸಂದರ್ಶನ ನಡೆಯಲಿದ್ದು, ಆಸಕ್ತ ಮತ್ತು ಸೂಕ್ತ ಅಭ್ಯರ್ಥಿಗಳು ಈ ವಾಕ್ ಇನ್ ಇಂಟರ್ವ್ಯೂನಲ್ಲಿ ಭಾಗಿಯಾಗಬಹುದಾಗಿದೆ.
ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಒಪ್ಪಂದದ ಆಧಾರದ ಮೇಲೆ ನೇಮಕಾತಿ ನಡೆಸಲಾಗುವುದು. ಈ ನೇಮಕಾತಿಗೆ ಸಂಬಂಧಿಸಿದ ಇತರ ಪ್ರಮುಖ ಮಾಹಿತಿಗಳಾದ ಅರ್ಜಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಸಂಖ್ಯೆ, ವೇತನಗಳು, ಆಯ್ಕೆ ವಿಧಾನ ಇತ್ಯಾದಿಗಳ ಮಾಹಿತಿ ಈ ಕೆಳಗಿನಂತಿವೆ.
ಸಂಸ್ಥೆಯ ಹೆಸರು: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ (NIT ಕರ್ನಾಟಕ)
ಹುದ್ದೆಯ ಹೆಸರು: ತಾತ್ಕಾಲಿಕ ಬೋಧಕ ಸಿಬ್ಬಂದಿ
ಹುದ್ದೆಗಳ ಸಂಖ್ಯೆ: 14
ಉದ್ಯೋಗ ಸ್ಥಳ: ಸುರತ್ಕಲ್ – ಕರ್ನಾಟಕ
ವೇತನ: 40000-50000 ರೂ ಪ್ರತಿ ತಿಂಗಳು
ವಯೋಮಿತಿ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು ಮೀರಿರಬಾರದು.
ವಯೋಮಿತಿ ಸಡಿಲಿಕೆ: ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕ ನಿಯಮಗಳ ಪ್ರಕಾರ
ಆಯ್ಕೆ ಪ್ರಕ್ರಿಯೆ: ನೇರ ಸಂದರ್ಶನ
ನೇರ ಸಂದರ್ಶನ ನಡೆಯುವ ದಿನಾಂಕ: 17 ಆಗಸ್ಟ್ 2022ರ ಬೆಳಗ್ಗೆ 8. 30ಕ್ಕೆ
ವಿಶೇಷ ಸೂಚನೆ: ನೇರ ಸಂದರ್ಶನ ನಡೆಯುವ ದಿನಾಂಕದಂದೇ 11 ಗಂಟೆಗೆ ಅಧಿಕೃತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಹೊರಡಿಸಲಾಗುವುದು.
ನೇರ ಸಂದರ್ಶನದ ವಿಳಾಸ: ಬೋರ್ಡ್ ರೂಮ್, ಮುಖ್ಯ ಆಡಳಿತಾತ್ಮಕ ಕಟ್ಟಡ, ಎನ್ಐಟಿಕೆ, ಸುರತ್ಕಲ್
ಅಧಿಸೂಚನೆಯನ್ನು ಬಿಡುಗಡೆ ಮಾಡಿದ ದಿನಾಂಕ: 5 ಆಗಸ್ಟ್ 2022
ವಾಕ್-ಇನ್ ದಿನಾಂಕ: 17 ಆಗಸ್ಟ್ 2022
ಅಧಿಕೃತ ವೆಬ್‌ಸೈಟ್: nitk.ac.in
ನೇರ ಸಂದರ್ಶನದಲ್ಲಿ ಅಗತ್ಯವಾಗಿ ಕೊಂಡೊಯ್ಯಬೇಕಾದ ದಾಖಲೆ
ಆಸಕ್ತ ಅಭ್ಯರ್ಥಿಗಳು ಭರ್ತಿಯಾದ ಅರ್ಜಿಯನ್ನು ನೇರ ಸಂದರ್ಶನಕ್ಕೆ ಕೊಂಡೊಯ್ಯವುದು ಅವಶ್ಯ.
ಪದವಿ ಮತ್ತು 10ನೇ ತರಗತಿ ಮಾರ್ಕ್ಸ್ ಕಾರ್ಡ್
ಸಕ್ಷಮ ಅಧಿಕಾರಿಗಳು ನೀಡಿದ ಅನುಭವ ಪ್ರಮಾಣಪತ್ರಗಳು/ಯಾವುದೇ ಸಂಬಂಧಿತ ಪ್ರಮಾಣಪತ್ರಗಳು/ ಪ್ರಶಂಸಾಪತ್ರಗಳು.
ಜಾತಿ ಪ್ರಮಾಣ ಪತ್ರ
ನಾನ್-ಕ್ರೀಮಿ ಲೇಯರ್ ಪ್ರಮಾಣಪತ್ರ ಅತ್ಯಗತ್ಯ
ಶೈಕ್ಷಣಿಕ ಅರ್ಹತೆ ಸಂಬಂಧಿಸಿದ ಯಾವುದೇ ಇತರ ಸಂಬಂಧಿತ ಮಾಹಿತಿ.