ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಕನ್ನಡ ಉಪನ್ಯಾಸಕರ ಹುದ್ದೆ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಗ್ರೂಪ್ ಬಿ ವೃಂದದ ಬ್ಯಾಕ್ಲಾಗ್ ಹುದ್ದೆ ಇದಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಬಿಬಿಎಂಪಿಯಲ್ಲಿ ಕನ್ನಡ ಉಪನ್ಯಾಸಕರು- ಒಟ್ಟು ಹುದ್ದೆ 3
ವಿದ್ಯಾರ್ಹತೆ: ಅಭ್ಯರ್ಥಿಯು ಅಧಿಕೃತ ವಿಶ್ವವಿದ್ಯಾಲಯದಿಂದ ಕನ್ನಡದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ: ಅಭ್ಯರ್ಥಿಯ ಕನಿಷ್ಠ 18 ಮತ್ತು ಗರಿಷ್ಠ ವಯೋಮಿತಿ 40 ವರ್ಷವಾಗಿದೆ.
ವೇತನ: 43,100- 83,900 ರೂ. ಮಾಸಿಕ
ಅರ್ಜಿ ಸಲ್ಲಿಕೆ: ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಈ ಹುದ್ದೆಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಈ ಹುದ್ದೆಗಳನ್ನು ಮೆರಿಟ್ ಆಧಾರದ ಮೇಲೆ ಭರ್ತಿ ಮಾಡಲಾಗುವುದು.
ಈ ಹುದ್ದೆಗೆ ಅಕ್ಟೋಬರ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ನವೆಂಬರ್ 7 ಆಗಿದೆ.
ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಕೆಪಿಎಸ್ಪಿ ಅಧಿಕೃತ ಜಾಲತಾಣ kpsc.kar.nic.in ಗೆ ಭೇಟಿ ನೀಡಿ.
ಬೆಂಗಳೂರಿನಲ್ಲಿರುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ಶಿಪ್ ಟ್ರೈನಿಂಗ್ ಹುದ್ದೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ವಾಕ್ ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಐಟಿಐ ಪದವಿ ಹೊಂದಿರುವ ಗರಿಷ್ಠ 21 ವರ್ಷ ದಾಟಿರದ ಅಭ್ಯರ್ಥಿಗಳು ಹಾಜರಾಗಬಹುದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಈ ಹುದ್ದೆಗೆ ಮಾಸಿಕ 10,333 ರೂ. ಗೌರವ ಧನ ನಿಗದಿಸಲಾಗಿದೆ. ಈ ಹುದ್ದೆಗೆ ಅಕ್ಟೋಬರ್ 17, 18, 21ರಂದು ಬಿಇಎಲ್ ನ ಸೆಂಟರ್ ಫಾರ್ ಲರ್ನಿಂಗ್ ಅಂಡ್ ಡೆವೆಲಪ್ಮೆಂಟ್, ಜಾಲಹಳ್ಳಿ ಬೆಂಗಳೂರು ಇಲ್ಲಿ ನೇರ ಸಂದರ್ಶನ ನಡೆಯಲಿದೆ.
ಈ ಹುದ್ದೆ ಕುರಿತು ಹೆಚ್ಚಿನ ಮಾಹಿತಿಗೆ ಅಭ್ಯರ್ಥಿಗಳು bel-india.in ಭೇಟಿ ನೀಡಿ.