ಮನೆ ಸುದ್ದಿ ಜಾಲ ಹರಿಹರ ಪೊಲೀಸ್‌ ಠಾಣೆಗೆ ವಚನಾನಂದ ಸ್ವಾಮೀಜಿ : ಪೋಕ್ಸೋ ಪ್ರಕರಣ

ಹರಿಹರ ಪೊಲೀಸ್‌ ಠಾಣೆಗೆ ವಚನಾನಂದ ಸ್ವಾಮೀಜಿ : ಪೋಕ್ಸೋ ಪ್ರಕರಣ

0

ದಾವಣಗೆರೆ: ವಚನಾನಂದ ಸ್ವಾಮೀಜಿ ವಿರುದ್ಧ ಗದಗದ ಲಕ್ಷ್ಮೇಶ್ವರದಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಹರಿಹರ ಗ್ರಾಮಾಂತರ ಠಾಣೆಗೆ ವರ್ಗಾವಣೆ ಆಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ದಾವಣಗೆರೆ ಎಸ್​ಪಿ ಹೆಚ್.ಟಿ.ಶೇಖರ್ ಮಾಹಿತಿ ನೀಡಿದ್ದಾರೆ. ವಚನಾನಂದ ಸ್ವಾಮೀಜಿ ವಿರುದ್ಧ ಬಾಲಕನ ತಾಯಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ. ನೊಂದ ಬಾಲಕನ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಬಾಲಕನ ಮೇಲೆ ದೌರ್ಜನ್ಯ ಆಗಿದೆ ಎಂದು ವಚನಾನಂದ ಸ್ವಾಮೀಜಿ ವಿರುದ್ಧ ದೂರಿನಲ್ಲಿ ಆರೋಪಿಸಲಾಗಿದೆ ಎಸ್​ಪಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ವಚನಾನಂದ ಸ್ವಾಮೀಜಿ ವಿರುದ್ಧ ಶೂನ್ಯ ಎಫ್​ಐಆರ್ ದಾಖಲಾಗಿತ್ತು. ಬಳಿಕ ಕೃತ್ಯ ನಡೆದಿದೆ ಎನ್ನಲಾದ ಸ್ಥಳ ವ್ಯಾಪ್ತಿಯ ಹರಿಹರ ಠಾಣೆಗೆ ಪ್ರಕರಣ ವರ್ಗಾವಣೆ ಆಗಿದೆ. ಹರ ಮಠದ ವಿಚಾರವಾಗಿ ಲೆಕ್ಕ ಕೊಡುವ ಮತ್ತ ಲೆಕ್ಕ ಕೇಳುವ ಕಾರ್ಯಕ್ರಮದ ಹಿನ್ನೆಲೆ ಸಾರ್ವಜನಿಕರಲ್ಲಿ ಬಹಳಷ್ಟು ಭಯದ ವಾತಾವರಣ ನಿರ್ಮಾಣವಾಗಿತ್ತು. ಎರಡು ಗುಂಪುಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ಆದ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಮಠದಲ್ಲಿ ಪೂಜೆ ಹೊರತುಪಡಿಸಿ ಯಾವುದೇ ಸಭೆ, ಸಮಾರಂಭಗಳಿಗೆ ನಿಷೇಧಿಸಿ ಡಿಸಿ ಆದೇಶಿಸಿದ್ದಾರೆ. ಮೇ 31ರ ವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ ಎಂದು ಎಸ್​ಪಿ ತಿಳಿಸಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹರಿಹರ ಗ್ರಾಮಾಂತರ ಠಾಣೆಗೆ ಸ್ವಾಮೀಜಿ ಇಂದು ಹಾಜರಾಗಿದ್ದಾರೆ. ಪೊಲೀಸರು ಸ್ವಾಮೀಜಿಯಿಂದ ಹೇಳಿಕೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣ ದಾಖಲಾದ ಹಿನ್ನೆಲೆ ವಚನಾನಂದ ಸ್ವಾಮೀಜಿ ಅವರನ್ನು ಇಂದು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯುವ ಸಾಧ್ಯತೆ ಇದೆ. ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಸ್ವಾಮೀಜಿ ವೈದ್ಯಕೀಯ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮಕ್ಕಳ ದುರ್ಬಳಕೆ ಹಾಗೂ ದೌರ್ಜನ್ಯ ಎಸಗಿದ ಆರೋಪದಡಿ ಈ ಮೊದಲ ದಾಖಲಾಗಿದ್ದ ಪ್ರಕರಣದಲ್ಲಿ ವಚನಾನಂದ ಸ್ವಾಮೀಜಿ ಅವರಿಗೆ ದಾವಣಗೆರೆ ಜಿಲ್ಲಾ ಕೋರ್ಟ್ ಈಗಾಗಲೇ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದ ತನಿಖೆಗೆ ಸಂಪೂರ್ಣ ಸಹಕರಿಸಬೇಕು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ನ್ಯಾಯಾಲಯದ ಅನುಮತಿಯಿಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂಬ ಷರತ್ತುಗಳನ್ನು ಸ್ವಾಮೀಜಿಗೆ ನ್ಯಾಯಾಲಯ ವಿಧಿಸಿತ್ತು ಎನ್ನಲಾಗಿದೆ.