ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ೨ ನೇ ಎಸಿಎಂಎಂ ಕೋರ್ಟ್ ಗೆ ೩ ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ.
ವಾಲ್ಮೀಕಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ೯೪ ಕೋಟಿ ರುಪಾಯಿ ನಿಗಮದ ಹಣವನ್ನು ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಹೀಗಾಗಿ ಇಡಿ ಏಕಕಾಲದಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶದಲ್ಲಿ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿತ್ತು. ಬಿ ನಾಗೇಂದ್ರ ಅವರ ಮೇಲೆ ಆಪ್ತನೋರ್ವನಿಂದ ೨೫ ಲಕ್ಷ ಲಂಚ ಸ್ವೀಕರಿಸಿರುವ ಆರೋಪ ಇದೆ.
Saval TV on YouTube