ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿದೆ ಎನ್ನಲಾದ ೧೮೭ ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ಇಆ) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಕಲ್ಲೇಶ್ ಬಿ ದೂರು ಆಧರಿಸಿ ಮುರಳಿ ಕಣ್ಣನ್ ಮತ್ತು ಮಿತ್ತಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಣಕಾಸು ಇಲಾಖೆಯನ್ನು ಸಿಲುಕಿಸುವಂತೆ ರಾಜ್ಯ ಸರ್ಕಾರಿ ಅಧಿಕಾರಿಯೊಬ್ಬರಿಗೆ ಒತ್ತಡ ಹೇರಿದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.