ಮನೆ ಕಾನೂನು ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: 2 ಅಧಿಕಾರಿಗಳು ಎಸ್​​ಐಟಿ ವಶಕ್ಕೆ

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: 2 ಅಧಿಕಾರಿಗಳು ಎಸ್​​ಐಟಿ ವಶಕ್ಕೆ

0

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧ ಇಬ್ಬರು ಅಧಿಕಾರಿಗಳನ್ನು ವಿಶೇಷ ತನಿಖಾ ದಳ ವಶಕ್ಕೆ ಪಡೆದುಕೊಂಡಿದೆ.

Join Our Whatsapp Group

ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ, ನಿಗಮದ ಲೆಕ್ಕಾಧಿಕಾರಿ ಪರಶುರಾಮ್​ ಅವರನ್ನು ಎಸ್​ಐಟಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಅಮಾನತುಗೊಂಡಿರುವ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಸಚಿವ ನಾಗೇಂದ್ರ ಅವರಿಗೆ ತಲೆ ನೋವಾಗಿ ಪರಿಣಮಿಸಿದ್ದಾರೆ.

ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ಎಸ್​ಐಟಿ ಅಧಿಕಾರಿಗಳ ಮುಂದೆ ಸಚಿವರ ಹೆಸರು ಹೇಳಿದರೇ, ಬಿ. ನಾಗೇಂದ್ರ ಅವರು ರಾಜೀನಾಮೆ ನೀಡುವುದು ನಿಶ್ಚಿತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ. ನಾಗೇಂದ್ರ ಅವರಿಗೆ “ಎಸ್​ಐಟಿ ಮುಂದೆ ನಿಮ್ಮ ಹೆಸರು ಪ್ರಸ್ತಾಪವಾದರೆ ರಾಜೀನಾಮೆ ಪಡೆಯುವುದಾಗಿ” ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ದೊರೆತಿದೆ. ಹೀಗಾಗಿ ಸಚಿವ ನಾಗೇಂದ್ರ ಅವರಿಗೆ ವ್ಯವಸ್ಥಾಪಕ ನಿರ್ದೇಶಕ ಪದ್ಮನಾಭ ತಲೆ ನೋವಾಗಿದ್ದಾರೆ. ಈ ಪ್ರಕರಣದ ತನಿಖೆಯನ್ನು ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ ಇದೆ.

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸುಮಾರು 80 ರಿಂದ 85 ಕೋಟಿ ಅನುದಾನ ದುರ್ಬಳಕೆಯಾಗಿದೆ. ಈ ಅವ್ಯವಹಾರದಿಂದ ಮನನೊಂದು ನಿಗಮದ ಅಧೀಕ್ಷಕ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್​ನೋಟ್​ ನಲ್ಲಿ ಸಚಿವರ ಮೌಖಿಕ ಆದೇಶದಂತೆ ಅವ್ಯಹಾರ ನಡೆದಿದೆ ಎಂದು ಚಂದ್ರಶೇಖರ ನಮೂದಿಸಿದ್ದರು.

ಪ್ರಕರಣದ ತನಿಖೆಯನ್ನು ಎಸ್​ಐಟಿ ನಡೆಸುತ್ತಿದೆ. ಇತ್ತ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕರು ಸಿಬಿಐ ಪ್ರಾದೇಶಿಕ ಕಚೇರಿಗೆ ದೂರು ನೀಡಿದ್ದಾರೆ.

ಹಿಂದಿನ ಲೇಖನಎನ್‌ಎಸ್‌ಯುಐ ರಾಷ್ಟ್ರೀಯ ಕಾರ್ಯದರ್ಶಿ ರಾಜ್ ಸಂಪತ್ ಕೊಲೆ
ಮುಂದಿನ ಲೇಖನಪುಣೆ ಪೋಶ ಅಪಘಾತ ಪ್ರಕರಣ: ಅಪ್ರಾಪ್ತನ ತಂದೆ ಮತ್ತು ಅಜ್ಜನಿಗೆ 14 ದಿನಗಳ ನ್ಯಾಯಾಂಗ ಬಂಧನ