ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿಗಳ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದಿಂದ ಮತ್ತೊಂದು ದೊಡ್ಡ ದಾಳಿ ನಡೆದಿದೆ. ಇಂದು ಬೆಳಗ್ಗೆ ಬೆಂಗಳೂರು ಮತ್ತು ಬಳ್ಳಾರಿ ಸೇರಿ ವಿವಿಧ ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ಪರಿಶೀಲನೆ ಆರಂಭಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಸಂಸದ ಇ. ತುಕಾರಾಂ, ಕಾಂಗ್ರೆಸ್ ಶಾಸಕರಾದ ನಾರಾ ಭರತ್ ರೆಡ್ಡಿ, ಹಾಗೂ ಕಂಪ್ಲಿ ಗಣೇಶ್ ಅವರ ನಿವಾಸಗಳಲ್ಲಿ ಈಗಾಗಲೇ ಇಡಿ ಅಧಿಕಾರಿಗಳ ದಾಳಿ ನಡೆದಿದ್ದು, ಸಾಕಷ್ಟು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಹಿಂದೆಯೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆಗೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ತನಿಖೆ ಆರಂಭವಾಗಿತ್ತು. ಇಡಿ ಅಧಿಕಾರಿಗಳು ಈಗ ಬೆಂಗಳೂರು ನಗರದ ಶಾಸಕರ ಭವನದಲ್ಲಿರುವ ಬಿ. ನಾಗೇಂದ್ರ ಕೊಠಡಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಅವರ ಪರ್ಸನಲ್ ಅಸಿಸ್ಟೆಂಟ್ (ಪಿಎ) ಗೋವರ್ಧನ ನಿವಾಸದಲ್ಲಿಯೂ ದಾಳಿ ನಡೆದಿದೆ.














