ಮನೆ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಬಿ ವೈ...

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ: ಬಿ ವೈ ವಿಜಯೇಂದ್ರ

0

ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.

Join Our Whatsapp Group

ಚಂದ್ರಶೇಖರನ್ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ 2 ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 1 ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಚಿವ ನಾಗೇಂದ್ರ ಗಮನಕ್ಕೆ ಬಾರದೇ ಈ ಅಕ್ರಮ ನಡೆದಿಲ್ಲ. ತೆಲಂಗಾಣ ರಾಜ್ಯದಲ್ಲಿ ಹಣಕಾಸಿನ ವರ್ಗಾವಣೆ ನಡೆದಿದೆ. ಲೋಕಸಭೆ ಚುನಾವಣೆ ಸಮಯದಲ್ಲಿ ಈ ಅವ್ಯವಹಾರ ನಡೆದಿದೆ. ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರವನ್ನು ಎಟಿಎಂ ರೀತಿಯಲ್ಲಿ ಬಳಕೆ ಮಾಡಿಕೊಂಡಿದೆ. ನಾವು ಆರೋಪ ಮಾಡಿದಾಗ ದಾಖಲೆ ಎಲ್ಲಿ ಎನ್ನುತ್ತಿದ್ದರು. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಮ್ಮ ಬಳಿ ದಾಖಲೆಗಳನ್ನು ಕೇಳುತ್ತಿದ್ದರು. ಈಗ ಸರ್ಕಾರ ಈ ಹಗರಣಕ್ಕೆ ಉತ್ತರವನ್ನು ನೀಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಇದು ರಾಜ್ಯದ ದೊಡ್ಡ ಅವ್ಯವಹಾರ. ಇದರಲ್ಲಿ ಕಾಂಗ್ರೆಸ್ ನಾಯಕರ ಕೈವಾಡ ಇರುವುದು ಸ್ಪಷ್ಟವಾಗಿದೆ. ತಕ್ಷಣ ಸಚಿವ ನಾಗೇಂದ್ರ ರಾಜಿನಾಮೆ ಪಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಆಗ್ರಹಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಮಾತ್ರ ಅವ್ಯವಹಾರ ನಡೆದಿಲ್ಲ. ಬೇರೆ ಇಲಾಖೆಗಳಲ್ಲೂ ಇದೇ ರೀತಿ ಅಕ್ರಮ ನಡೆದಿರುವ ಶಂಕೆ ಇದೆ. ಈ ರೀತಿ ಅವ್ಯವಹಾರ ನಡೆಸಿದ ಹಣವನ್ನು ಲೋಕಸಭಾ ಚುನಾವಣೆಯಲ್ಲಿ ಬಳಕೆ ಮಾಡಲಾಗಿದೆ. ಅಂತಾರಾಜ್ಯ ಮಟ್ಟದಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಿಜಯೇಂದ್ರ ಆರೋಪ ಮಾಡಿದರು. ಜತೆಗೆ, ಎಲ್ಲಿಲ್ಲಿ ಹಣಕಾಸು ವ್ಯವಹಾರ ನಡೆದಿದೆ ಎಂಬ ಬಗ್ಗೆ ತನಿಖೆ ಆಗಬೇಕು. ಪ್ರಕರಣವನ್ನು ಸಿಬಿಐಗೆ ನೀಡಿದಾಗ ಮಾತ್ರ ಸತ್ಯ ಹೊರಬರಲಿದೆ ಎಂದರು.

ಮೃತ ಚಂದ್ರಶೇಖರನ್ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ಡೆತ್​ನೋಟ್​ ಬರೆದಿಟ್ಟು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ (52) ಆತ್ಮಹತ್ಯೆಗೆ ಶರಣಾಗಿದ್ದರು.

ಹಿಂದಿನ ಲೇಖನಶಿವನಿಗೆ ನಮ್ಮ ರಕ್ಷಣೆಯ ಅಗತ್ಯವಿಲ್ಲ: ಅಕ್ರಮ ಮಂದಿರ ಕೆಡವಲು ದೆಹಲಿ ಹೈಕೋರ್ಟ್ ಅನುಮತಿ
ಮುಂದಿನ ಲೇಖನವಾಲ್ಮೀಕಿ ನಿಗಮದಲ್ಲಿ ಅಕ್ರಮ: ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಗಡೆ – ಎಚ್‌.ಸಿ. ಮಹದೇವಪ್ಪ