ಮನೆ ಸುದ್ದಿ ಜಾಲ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ವನಮಹೋತ್ಸವ

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪೊಲೀಸ್ ಇಲಾಖೆಯಲ್ಲಿ ವನಮಹೋತ್ಸವ

0

ಮೈಸೂರು, ಜೂನ್ 5: ವಿಶ್ವ ಪರಿಸರ ದಿನಾಚರಣೆ-2026ರ ಅಂಗವಾಗಿ ನಗರ ಪೊಲೀಸ್ ಇಲಾಖೆಯ ವತಿಯಿಂದ ಇಂದು ಫೈರಿಂಗ್ ರೇಂಜ್ ಮೈದಾನದಲ್ಲಿ ವಿಶೇಷ ವನಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಯಿತು ಎನ್ನಲಾಗುತ್ತಿದೆ.

ಇದರ ಕುರಿತು ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸೀಮಾ ಲಾಟ್ಕರ್ ಅವರು ಸಸಿಗಳನ್ನು ನೆಡುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಹೆಚ್ಚಿನ ಸಂಖ್ಯೆಯಲ್ಲಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಿಸುವ ಜವಾಬ್ದಾರಿಯನ್ನು ಹೊಂದಬೇಕು ಎಂದು ಅವರು ಕರೆ ನೀಡಿದರು. ಈ ಸಂದರ್ಭದಲ್ಲಿ ಉಪ ಪೊಲೀಸ್ ಆಯುಕ್ತರಾದ ಡಾ. ಹರ್ಷಪ್ರಿಯಂವದ, ಸುಂದರ್ ರಾಜ್ K.S. ಹಾಗೂ ಸಿದ್ದನಗೌಡ ಪಾಟೀಲ್ ಸೇರಿದಂತೆ ಇಲಾಖೆಯ ಪ್ರಮುಖ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿ ಸಸಿ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

ಹಾಗೂ ಕಾರ್ಯಕ್ರಮದಲ್ಲಿ ಹಸಿರು ಪರಿಸರ ನಿರ್ಮಾಣ, ಪರಿಸರ ಮಾಲಿನ್ಯ ನಿಯಂತ್ರಣ ಹಾಗೂ ಪ್ರಕೃತಿ ಸಂಪತ್ತಿನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸಲಾಯಿತು. ವನಮಹೋತ್ಸವದ ಮೂಲಕ ಪರಿಸರ ಕಾಳಜಿಯ ಸಂದೇಶವನ್ನು ಸಮಾಜಕ್ಕೆ ಸಾರಲಾಯಿತು ಎನ್ನಲಾಗಿದೆ.