ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟ ದೇಗುಲದಲ್ಲಿ ಇಂದು ಚಾಮುಂಡೇಶ್ವರಿ ದೇವಿಯ ವರ್ಧಂತಿ ಮಹೋತ್ಸವ ನಡೆಯುತ್ತಿದೆ. ಹೀಗಾಗಿ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸಡಗರ ಸಂಭ್ರಮ ಮನೆಮಾಡಿದೆ. ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಸಾಗರೋಪಾದಿಯಲ್ಲಿ ಭಕ್ತರು ಬರುತ್ತಿದ್ದಾರೆ.
ಬೆಳಗ್ಗೆ 8 ಗಂಟೆಯಿಂದಲೇ ಭಕ್ತರಿಗೆ ದೇವಿಯ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಅಭ್ಯಂಜನ ಸ್ನಾನ, ರುದ್ರಾಭಿಷೇಕ, ಪಂಚಾಮೃತಭಿಷೇಕ, ಕುಂಕುಮಾರ್ಚನೆ ಸೇವೆ ನಡೆಯುತ್ತಿವೆ.
ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿರುವುದು ಕಂಡುಬಂದಿದೆ. ವಿವಿಧ ಬಗೆಯ ಹೂವುಗಳಿಂದ ದೇವಸ್ಥಾನದ ಗರ್ಭಗುಡಿ ಅಲಂಕಾರ ಮಾಡಲಾಗಿದೆ.
ಯದುವೀರ್ ಒಡೆಯರ್, ಪ್ರಮೋದಾದೇವಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಇಂದು ರಾತ್ರಿ 8 ಗಂಟೆ ಬಳಿಕ ದರ್ಬಾರ್ ಉತ್ಸವ ನಡೆಯಲಿದೆ. ಅರಮನೆಯ ದರ್ಬಾರ್ ಮಾದರಿಯಲ್ಲೇ ಅಮ್ಮನವರಿಗೆ ದರ್ಬಾರ್ ಉತ್ಸವ ನೆರವೇರಲಿದೆ.