ಮೈಸೂರು(Mysuru): ನಾಡದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರಸಂಹಿತೆ ಜಾರಿಗಳಿಸಬೇಕೆಂದು ಒತ್ತಾಯಿಸಿ ಸರ್ವ ಅರ್ಜತೆ ಫೌಂಡೇಶನ್ ಹಾಗೂ ಇತರೆ ಸಂಘಟನೆಗಳು ಚಾಮುಂಡಿ ಬೆಟ್ಟದ ಮುಖ್ಯ ಕಾರ್ಯದರ್ಶಿ ಗೋವಿಂದ್ ರಾಜ್ ಅವರಿಗೆ ಮನವಿ ಸಲ್ಲಿಸಿದ್ದಾರೆ.
ಚಾಮುಂಡಿ ಅಮ್ಮನವರ ದರ್ಶನಕ್ಕೆ ದೇಶ ವಿದೇಶಗಳಿಂದ ಪ್ರವಾಸಿಗರು ಹಾಗೂ ಭಕ್ತರು ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಮೈಸೂರು ಅರಸರ ಕೊಡುಗೆಗಳಿಂದ ಮೈಸೂರು ಪ್ರವಾಸಿ ತಾಣವಾಗಿ ಪ್ರಸಿದ್ಧಿ ಪಡೆದಿದೆ. ಚಾಮುಂಡೇಶ್ವರಿ ಬೆಟ್ಟ ಧಾರ್ಮಿಕ ಕೇಂದ್ರವಾಗಿದ್ದು, ದೇಶದ ಶಕ್ತಿ ಪೀಠಗಳಲ್ಲೊಂದು. ಆದ್ದರಿಂದ ಇಲ್ಲಿಗೆ ಬರುವ ಭಕ್ತರಿಗೆ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿದ್ದಾರೆ.
ಉಡುಪಿ, ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ, ಕೇರಳದ ಗುರುವಾಯೂರ್’ನಲ್ಲಿ ಇರುವಂತೆ ವಸ್ತ್ರ ಸಂಹಿತೆಯನ್ನು ಎಲ್ಲರೂ ಪಾಲಿಸಬೇಕು. ಪುರುಷರು ಪಂಚೆ ಅಥವಾ ಪ್ಯಾಂಟ್ ಶರ್ಟ್ ಧರಿಸಿ ಹಾಗೂ ಮಹಿಳೆಯರು ಸೀರೆ ಅಥವಾ ಚೂಡಿದಾರ್‌ಗಳನ್ನು ಹಾಕಿಕೊಂಡು ಬರುವಂತೆ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಸರ್ವ ಅರ್ಜಿತೆ ಫೌಂಡೇಶನ್ ಅಧ್ಯಕ್ಷರಾದ ಪದ್ಮ ಮತ್ತಿತರರು ಉಪಸ್ಥಿತರಿದ್ದರು.