“ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರದಲ್ಲಿ ನಟ ವಸಿಷ್ಠ ಸಿಂಹ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಚಿತ್ರವನ್ನು ವಿಜಯಪಾಲ್ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚೆಗೆ ತ್ರಿಬಾಣಧಾರಿ ಬಾರ್ಬರಿಕ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ಇದರ ಮೂಲಕ ಚಿತ್ರದ ಕಥಾವಸ್ತುವನ್ನು ಪರಿಚಯಿಸಲಾಗಿದೆ. ಪೌರಾಣಿಕ ಮತ್ತು ಸಾಮಾಜಿಕ ಅಂಶಗಳು ಬೆರೆತಿರುವ ಕಥೆ ಇದಾಗಿದೆ. ಭೀಮನ ಮೊಮ್ಮಗ ಮತ್ತು ಘಟೋತ್ಕಚನ ಮಗ ಬಾರ್ಬರಿಕನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ.
ಮೂರು ಬಾಣಗಳನ್ನು ಏಕಕಾಲಕ್ಕೆ ಹೂಡುವ ಬಾರ್ಬರಿಕನ ಅದ್ಭುತ ಪರಾಕ್ರಮವನ್ನು ಈ ಮೋಷನ್ ಪೋಸ್ಟರ್‌ನಲ್ಲಿ ವಿವರಿಸಲಾಗಿದೆ. ಈ ಜಗತ್ತು ಗಮನಿಸದ ಒಬ್ಬ ಮಹಾವೀರನ ಕಥೆ ಇದು ಎಂದು ಈ ಪೋಸ್ಟರ್‌ನಲ್ಲಿ ಹೇಳಲಾಗಿದೆ. ತ್ರಿಬಾಣಧಾರಿ ಬಾರ್ಬರಿಕ ಚಿತ್ರದಲ್ಲಿ ಸತ್ಯರಾಜ್, ವಸಿಷ್ಠ ಸಿಂಹ, ಸಂಚಿ ರೈ, ಸತ್ಯಂ ರಾಜೇಶ್, ಕ್ರಾಮತಿ ಕಿರಣ್ ಮುಂತಾದವರು ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ.
ಚಿತ್ರೀಕರಣ ಮುಗಿದು ಸದ್ಯ ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವ ತ್ರಿಬಾಣಧಾರಿ ಬಾರ್ಬರಿಕ ಚಿತ್ರವು ಪ್ಯಾನ್ ಇಂಡಿಯಾ ಚಿತ್ರಾಗಿ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.