ಮುಂಬೈ : ಬಾಲಿವುಡ್‌ನ ಹಿರಿಯ ನಟ ಧರ್ಮೇಂದ್ರ (89) ಇಂದು ಮುಂಬೈನ ನಿವಾಸದಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ.
ಕೆಲ ದಿನಗಳ ಹಿಂದೆ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಅನೇಕ ಬಾಲಿವುಡ್ ತಾರೆಯರು ಅವರನ್ನ ಭೇಟಿ ಮಾಡಲು ಆಸ್ಪತ್ರೆಗೆ ಧಾವಿಸಿದ್ದರು.
ದೀರ್ಘ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಬಾಲಿವುಡ್‌ನ ಹಿರಿಯ ನಟ, ಎವರ್‌ಗ್ರೀನ್ ಸ್ಟಾರ್, ಆಕ್ಷನ್ ಕಿಂಗ್ ಧರ್ಮೇಂದ್ರ ಅವರು 89ನೇ ವಯಸ್ಸಿನಲ್ಲಿ ವಿಧಿವಶರಾಗಿದ್ದಾರೆ. ಇದೇ ಡಿಸೆಂಬರ್ 8ರಂದು ಅವರು 90ನೇ ವಸಂತಕ್ಕೆ ಕಾಲಿಡಬೇಕಿತ್ತು.
ಧರ್ಮೇಂದ್ರ ಪತ್ನಿ ಹೇಮಾ ಮಾಲಿನಿ, ಪ್ರಕಾಶ್ ಕೌರ್ ಮಕ್ಕಳಾದ ಮಕ್ಕಳಾದ ಸನ್ನಿ ಡಿಯೋಲ್, ಬಾಬಿ ಡಿಯೋಲ್, ವಿಜೇತಾ, ಅಜೀತಾ, ಇಶಾ ಡಿಯೋಲ್ ಮತ್ತು ಅಹಾನಾ ಡಿಯೋಲ್ ಅವರನ್ನು ಅಗಲಿದ್ದಾರೆ.
ಸಲ್ಮಾನ್ ಖಾನ್, ಶಾರುಖ್ ಖಾನ್, ಗೋವಿಂದ, ರಿತೇಶ್ ದೇಶ್‌ಮುಖ್, ಜೆನಿಲಿಯಾ ದೇಶ್‌ಮುಖ್, ಅಮೀಷಾ ಪಟೇಲ್ ಸೇರಿದಂತೆ ಮುಂತಾದ ಸ್ಟಾರ್ ನಟ-ನಟಿಯರು ಮುಂಬೈನ್ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ಭೇಟಿ ನೀಡಿ ಧರ್ಮೇಂದ್ರ ಅವರ ಆರೋಗ್ಯವನ್ನು ವಿಚಾರಿಸಿದ್ದರು. ಇದಾದ ಬಳಿಕ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಿಸಿ, ಮನೆಯಲ್ಲೇ ಚಿಕಿತ್ಸೆ ಮುಂದುವರಿಸಲು ಕುಟುಂಬ ನಿರ್ಧರಿಸಿತ್ತು.















