ನವದೆಹಲಿ(New delhi): ಉಪರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ರ್ಗರೇಟ್ ಆಳ್ವ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಸಂಜಯ್ ರಾವತ್ ಮತ್ತು ಇತರ ಪ್ರತಿಪಕ್ಷದ ನಾಯಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅಧಿಕಾರಾವಧಿ ಆಗಸ್ಟ್ 10ರಂದು ಕೊನೆಗೊಳ್ಳಲಿದೆ. ಆಗಸ್ಟ್ 6 ರಂದು ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಬಹಿರಂಗಗೊಳ್ಳಲಿದೆ.