ಮನೆ ರಾಷ್ಟ್ರೀಯ ಇಂದು ಉಪ ರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ

ಇಂದು ಉಪ ರಾಷ್ಟ್ರಪತಿ ಚುನಾವಣೆ: ಸಂಜೆ ವೇಳೆಗೆ ಫಲಿತಾಂಶ

0

ನವದೆಹಲಿ(New Delhi): ಉಪರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ಬೆಳಗ್ಗೆ 10ರಿಂದ ಮತದಾನ ಆರಂಭವಾಗಿದ್ದು, ಸಾಯಂಕಾಲ 5 ಗಂಟೆಯವರೆಗೆ ನಡೆಯಲಿದೆ. ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಜಗದೀಪ್ ಧನಕರ್ ಮತ್ತು ವಿರೋಧ ಪಕ್ಷಗಳ ಸಹಮತದ ಅಭ್ಯರ್ಥಿಯಾಗಿ ಕಾಂಗ್ರೆಸ್ ನಾಯಕಿ ಮಾರ್ಗರೇಟ್ ಆಳ್ವ ಕಣದಲ್ಲಿದ್ದಾರೆ.

ನೂತನ ಉಪ ರಾಷ್ಟ್ರಪತಿಗಳ ಆಯ್ಕೆಗೆ ಸಂಸತ್ತಿನ ಉಭಯ ಸದನಗಳ ಸದಸ್ಯರು ಮತ ಹಾಕಲಿದ್ದಾರೆ. ಎನ್‌ಡಿಎ ಪರವಾಗಿ ಕಣಕ್ಕಿಳಿದಿರುವ ಪಶ್ಚಿಮ ಬಂಗಾಳದ ಮಾಜಿ ಗವರ್ನರ್ ಧನಕರ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ.

80 ವರ್ಷದ ಮಾರ್ಗರೇಟ್ ಆಳ್ವ ಅವರು ಕಾಂಗ್ರೆಸ್ ಹಿರಿಯ ನಾಯಕಿಯಾಗಿದ್ದು, ರಾಜಸ್ಥಾನ ಮತ್ತು ಉತ್ತರಾಖಂಡದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರೆ, 71 ವರ್ಷದ ಧನ್ ಕರ್ ಅವರು ಸಮಾಜವಾದಿ ಹಿನ್ನೆಲೆ ಹೊಂದಿರುವ ರಾಜಸ್ಥಾನದ ಜಾಟ್ ಸಮುದಾಯದ ನಾಯಕರಾಗಿದ್ದಾರೆ.

ಆಮ್ ಆದ್ಮಿ ಪಕ್ಷ (ಎಎಪಿ) ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ವಿರೋಧ ಪಕ್ಷದ ಅಭ್ಯರ್ಥಿಗೆ ಬೆಂಬಲ ನೀಡಿದ ನಂತರ ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಆಳ್ವಾ ಅವರಿಗೆ ನೀಡುತ್ತಿದೆ. ಐಎಂಐಎಂ ಕೂಡ ಆಳ್ವಾ ಅವರಿಗೆ ಬೆಂಬಲ ನೀಡಿದೆ.

ಸಂಯುಕ್ತ ಜನತಾ ದಳ, ವೈಎಸ್‌ಆರ್‌ಸಿಪಿ, ಬಿಎಸ್‌ಪಿ, ಎಐಎಡಿಎಂಕೆ ಮತ್ತು ಶಿವಸೇನೆಯಂತಹ ಕೆಲವು ಪ್ರಾದೇಶಿಕ ಪಕ್ಷಗಳ ಬೆಂಬಲದೊಂದಿಗೆ, ಎನ್‌ಡಿಎ ಅಭ್ಯರ್ಥಿ 515 ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆಯಿದೆ, ಇದು ಅವರ ಗೆಲುವಿಗೆ ಸುಲಭ ಹಾದಿಯಾಗಿದೆ.  ಮಾರ್ಗರೇಟ್ ಆಳ್ವ ಅವರ ಉಮೇದುವಾರಿಕೆಗೆ ಪಕ್ಷಗಳು ಘೋಷಿಸಿದ ಬೆಂಬಲದಿಂದ 200ಕ್ಕೂ ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆಯಿದೆ.

ಲೋಕಸಭೆಯಲ್ಲಿ 23 ಮತ್ತು ರಾಜ್ಯಸಭೆಯಲ್ಲಿ 16 ಸಂಸದರನ್ನು ಹೊಂದಿರುವ ತೃಣಮೂಲ ಕಾಂಗ್ರೆಸ್ ಉಪರಾಷ್ಟ್ರಪತಿ ಚುನಾವಣೆಯಿಂದ ದೂರ ಉಳಿಯಲು ನಿರ್ಧರಿಸಿದೆ.

ಮತದಾನ ಮುಗಿದ ಬಳಿಕ ಮತ ಎಣಿಕೆ ನಡೆಯಲಿದೆ. ಸಂಜೆ ವೇಳೆಗೆ ಚುನಾವಣಾಧಿಕಾರಿಗಳು ಮುಂದಿನ ಉಪ ರಾಷ್ಟ್ರಪತಿಗಳ ಹೆಸರನ್ನು ಪ್ರಕಟಿಸಲಿದ್ದಾರೆ.

ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಇದೇ ಆಗಸ್ಟ್ 10 ರಂದು ಕೊನೆಗೊಳ್ಳಲಿದೆ. ಉಪ ರಾಷ್ಟ್ರಪತಿಗಳು ರಾಜ್ಯಸಭೆಯ ಸಭಾಪತಿಗಳೂ ಆಗಿರುತ್ತಾರೆ.

ಹಿಂದಿನ ಲೇಖನಸಿಎಂಗೆ ಕೋವಿಡ್ ದೃಢ:  ದೆಹಲಿ ಪ್ರವಾಸ ರದ್ದು
ಮುಂದಿನ ಲೇಖನರಾಜ್ಯದ 108 ಇನ್ಸ್ ಪೆಕ್ಟರ್ ಗಳ ವರ್ಗಾವಣೆ