ಮನೆ ಸುದ್ದಿ ಜಾಲ ಮಂಗಳೂರು ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ಸಾವು

ಮಂಗಳೂರು ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆ: ಐವರು ಕಾರ್ಮಿಕರ ಸಾವು

0

ಮಂಗಳೂರು(Mangalore): ಎಂಎಸ್​ಇಝಡ್​ನಲ್ಲಿರುವ ಮೀನಿನ ಫ್ಯಾಕ್ಟರಿಯಲ್ಲಿ ವಿಷಾನಿಲ ಸೋರಿಕೆಯಾಗಿ ಐದು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ‌.

ಮಂಗಳೂರಿನ ಎಂಎಸ್​ಇಝಡ್‌ (ಮಂಗಳೂರು ವಿಶೇಷ ಆರ್ಥಿಕ ವಲಯ)ನಲ್ಲಿ ಈ ದುರ್ಘಟನೆ ನಡೆದಿದ್ದು, ವಿಷಾನಿಲ ಸೋರಿಕೆಯಿಂದ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ.

ಪಶ್ಚಿಮ ಬಂಗಾಳದ ಉಮರ್ ಫಾರೂಕ್, ನಿಝಾಮುದ್ದೀನ್ ಸಾಬ್, ಸಮೀರುಲ್ಲಾ ಇಸ್ಲಾಂ ಸೇರಿದಂತೆ ಐವರು ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳ ಮೂಲದವರಾದ ಉಳಿದವರು ಗಂಭೀರವಾಗಿ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಮೀನಿನ ಫ್ಯಾಕ್ಟರಿಯಲ್ಲಿ ರಾತ್ರಿ ವೇಳೆ ಕಾರ್ಮಿಕನೊಬ್ಬ ಮೀನಿನ ತ್ಯಾಜ್ಯದ ಟ್ಯಾಂಕ್​ನ್ನು ಶುಚಿಗೊಳಿಸಲು ಕೆಳಗಿಳಿದಿದ್ದು, ಈ ಸಂದರ್ಭದಲ್ಲಿ ಏಕಾಏಕಿ ಅಸ್ವಸ್ಥಗೊಂಡು ಬಿದ್ದಿದ್ದಾನೆ. ಕೂಡಲೇ ಆತನನ್ನು ರಕ್ಷಿಸಲು ಇತರ ಕಾರ್ಮಿಕರು ಹೋಗಿದ್ದಾರೆ. ಈ ವೇಳೆ ಅವರು ಕೂಡಾ ಅಸ್ವಸ್ಥಗೊಂಡಿದ್ದಾರೆ ಎಂದು ಹೇಳಲಾಗಿದೆ.

ಕೂಡಲೇ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇವರಲ್ಲಿ ಐದು ಮಂದಿ ಮೃತಪಟ್ಟಿದ್ದರೆ, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.