ಮೈಸೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿತ ಪೋಲಿಂಗ್ ಅಧಿಕಾರಿಗಳಿಗೆ ಮೊದಲ ಹಂತದ ತರಬೇತಿಯನ್ನು ಏಪ್ರಿಲ್ 22 ಹಾಗೂ 23 ರಂದು ನಡೆಸಲು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅಧಿಕಾರಿಗಳಿಗೆ ಸೂಚಿಸಿದರು
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ರ್ಯಾಂಡಮೈಸೇಷನ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು ವಿಧಾನಸಭಾ ಕ್ಷೇತ್ರವಾರು ತರಬೇತಿಗಳು ನಡೆಯಬೇಕು, 2905 ಪಿ.ಆರ್.ಒ.2905 ಎಪಿಆರ್ ಒ ಹಾಗೂ 5810 ಪೊಲಿಂಗ್ ಅಧಿಕಾರಿಗಳು ತರಬೇತಿಯಲ್ಲಿ ಭಾಗವಹಿಸಬೇಕು. ನೇಮಕವಾಗಿರುವ ಎಲ್ಲಾ ಅಧಿಕಾರಿಗಳು ತಪ್ಪದೇ ತರಬೇತಿಯಲ್ಲಿ ಭಾಗವಹಿಸಬೇಕಾಗಿದ್ದು ತರಬೇತಿಗೆ ಗೈರು ಹಾಜರಾಗುವ ಅಧಿಕಾರಿಗಳ ವಿರುದ್ಧ ಪ್ರಜಾಪ್ರತಿನಿಧಿ ಕಾಯ್ದೆ ಅಡಿ ಕ್ರಮ ಜರುಗಿಸಲಾಗುವುದೆಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕವಿತ ರಾಜಾರಾಂ,ಎನ್.ಐ.ಸಿ.ಅಧಿಕಾರಿಗಳಿದ್ದರು.
Saval TV on YouTube