ಮನೆ ರಾಜಕೀಯ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರ: ಮತದಾನ‌ ಆರಂಭ

ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರ: ಮತದಾನ‌ ಆರಂಭ

0

ಮೈಸೂರು (Mysuru): ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಿರುವ ವಿಧಾನ ಪರಿಷತ್ ದಕ್ಷಿಣ ಪದವೀಧರರ ಕ್ಷೇತ್ರದ ಚುನಾವಣೆ ಸೋಮವಾರ ಆರಂಭವಾಗಿದೆ.

ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಬಿಜೆಪಿಯಿಂದ ಮೈ.ವಿ. ರವಿಶಂಕರ್, ಜೆಡಿಎಸ್‌ನಿಂದ ಎಚ್.ಕೆ. ರಾಮು, ಕಾಂಗ್ರೆಸ್‌‌ನಿಂದ ಮಧು ಜಿ.ಮಾದೇಗೌಡ, ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ರೈತ- ದಲಿತ‌ ಚಳವಳಿಗಳ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪ್ರಸನ್ನ ಎನ್.ಗೌಡ ಸೇರಿದಂತೆ ಒಟ್ಟು 19 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕ್ಷೇತ್ರದ 150 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಒಟ್ಟು 1.41 ಲಕ್ಷ ಮತದಾರರಿದ್ದಾರೆ. ಜೂನ್ 15ರಂದು ಮತ ಎಣಿಕೆ ನಡೆಯಲಿದೆ.

ಹಿಂದಿನ ಲೇಖನಭಾರತೀಯ ನೌಕಾಪಡೆಯಲ್ಲಿ 338 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಮತದಾರರಿಗೆ ಹಂಚಲು ಕೊಂಡೊಯ್ಯುತ್ತಿದ್ದ 17.40 ಲಕ್ಷ ನಗದು ವಶ