ಬೆಂಗಳೂರು: ಎಐಟಿಯುಸಿಗೆ ಸಂಯೋಜನೆಗೊಂಡಿರುವ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಫೆ.13 ಮತ್ತು 14 ರಂದು ಫ್ರೀಡಂ ಪಾರ್ಕ್ ನಲ್ಲಿ ರಾಜ್ಯಮಟ್ಟದ ವಿಧಾನಸೌಧ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದ ಮೂಲೆ ಮೂಲೆಗಳಿಂದ ೨೦,೦೦೦ಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಆಶಾಗಳನ್ನು ವಂಚಿಸುತ್ತಿರುವ ಆರ್.ಸಿ.ಹೆಚ್ ಪೋರ್ಟಲ್ ನ್ನು ವೇತನ ಪಾವತಿ ಪ್ರಕ್ರಿಯೆಯಿಂದ ಡೀಲಿಂಕ್ ಮಾಡಬೇಕು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ಕನಿಷ್ಠ ರೂ.೧೫,೦೦೦ ನಿಗದಿ ಮಾಡಬೇಕು, ಪ್ರೋತ್ಸಾಹಧನವಿಲ್ಲದ ಹೆಚ್ಚುವರಿ ಕೆಲಸಗಳನ್ನು ಹಾಗೂ ಮೊಬೈಲ್ ಆಧಾರಿತಕೆಲಸಗಳನ್ನು ಒತ್ತಾಯಪೂರ್ವಕವಾಗಿ ನೀಡಬಾರದು, ಹಲವು ವರ್ಷಗಳಿಂದ ಬಾಕಿಯಿರುವ ಪ್ರೋತ್ಸಾಹ ಧನ ಡುಗಡೆ ಮಾಡಬೇಕು ಮುಂತಾದ ಬೇಡಿಕೆಗಳಿಗಾಗಿ ಆಗ್ರಹಿಸಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಬೇಡಿಕೆಗಳು
ಕಳೆದ ಎಂಟು ವರ್ಷಗಳಿಂದ ದುಡಿದಷ್ಟು ಪ್ರೋತ್ಸಾಹ ಧನ ಸಿಗದೇ ಆಗುತ್ತಿರುವ ವಂಚನೆ ತಡೆಗಟ್ಟಲು ಆಶಾ ಪೇಮೆಂಟ್ ಪ್ರಕ್ರಿಯೆಯಿಂದ RCH ಪೋರ್ಟಲ್ ಅನ್ನು ಡೀಲಿಂಕ್ ಮಾಡಿ!.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಕನಿಷ್ಟ ರೂ.೧೫,೦೦೦ ಒಟ್ಟು ಪ್ರೋತ್ಸಾಹ ಧನ ನೀಡಬೇಕು.
ಮೊಬೈಲ್ ಕೆಲಸಗಳನ್ನು ಒತ್ತಾಯಪೂರಕವಾಗಿ ಮಾಡಿಸಿಕೊಳ್ಳುತ್ತಿರುವುದನ್ನು ಕೈಬಿಡಿ. ಅಥವಾ ಮೊಬೈಲ್, ಡಾಟಾ ಒದಗಿಸಿ. ಮೊಬೈಲ್ ಕೆಲಸಗಳಿಗೆ ಪ್ರೋತ್ಸಾಹ ಧನ ನಿಗದಿ ಮಾಡಿ. ಯಾರಿಗೆ ಮೊಬೈಲ್ ಕೆಲಸ ಮಾಡಲು ಆಗುವುದಿಲ್ಲವೋ ಅವರಿಗೆ ಪರ್ಯಾಯ ವ್ಯವಸ್ಥೆ ಮಾಡಿ.
ಸರ್ಕಾರದಿಂದ ಆದೇಶಿಸಬೇಕಾದ ಬೇಡಿಕೆಗಳು
ನಗರ ಆಶಾ ಕಾರ್ಯಕರ್ತೆಯರ ಹೆಚ್ಚುವರಿ ಕೆಲಸ ಮತ್ತು ನಗರ ಜೀವನದ ದುಬಾರಿ ಖರ್ಚು ವೆಚ್ಚಗಳಿಗೆ ಅನುಗುಣವಾಗಿ ಕನಿಷ್ಠ ರೂ.೨೦೦೦ರಷ್ಟು ಗೌರವಧನವನ್ನು ಹೆಚ್ಚಿಗೆ ಮಾಡಬೇಕು.
೬೦ ವರ್ಷಕ್ಕೆ ಸೇವಾ ನಿವೃತ್ತಿ ಪಡೆಯುವ ಕಾರ್ಯಕರ್ತೆಯರಿಗೆ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಇರುವಂತೆ ರೂ.೩ ಲಕ್ಷಕ್ಕೆ ಹೆಚ್ಚಿಸುವುದು.
ತೀವ್ರವಾದ ಅನಾರೋಗ್ಯ, ಚಿಕಿತ್ಸೆ ಪಡೆಯುವ ಅವಧಿಯಲ್ಲಿ ಕನಿಷ್ಠ ೩ ತಿಂಗಳುಗಳ ಕಾಲ ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ರುಟೀನ್ ಚಟುವಟಿಕೆಗಳ ನಿಗದಿತ ಪ್ರೋತ್ಸಾಹಧನ ನೀಡಬೇಕು.
ಸುವರ್ಣ ಆರೋಗ್ಯ ಟ್ರಸ್ಟ್ ಅನ್ನು ಆರೋಗ್ಯ ವಿಮಾ ಯೋಜನೆಯಂತೆ ೫ ಲಕ್ಷ ರೂ. ವರೆಗೆ ವಿವಿಧ ಕಾಯಿಲೆಗಳಿಗೆ ಉಚಿತ ಚಿಕಿತ್ಸೆಯನ್ನು ಆಶಾ ಮತ್ತು ಆಶಾ ಕುಟುಂಬಕ್ಕೆ ನೀಡಬೇಕು.
ಕಳೆದ ೨ ವರ್ಷದಿಂದ ನೀಡದಿರುವ ಸಮವಸ್ತ್ರಗಳನ್ನು ಒದಗಿಸಲು ಕೂಡಲೆ ಕ್ರಮ ಕೈಗೊಳ್ಳಬೇಕು.
ಕಳೆದ ೪ ವರ್ಷದಿಂದ ನೀಡದಿರುವ ಪ್ರತೀ ವರ್ಷ ನೀಡುವ ಡೈರಿಯನ್ನು ನಿಗದಿತ ಸಮಯಕ್ಕೆ ಒದಗಿಸಿ.
ಆದ್ಯತೆಯ ಮೇಲೆ ಸರ್ಕಾರದಿಂದ ಈಡೇರಬೇಕಾದ ಬೇಡಿಕೆಗಳು
ವರ್ಷಗಳಿಂದ ಆರ್ ಸಿ ಎಚ್ ಪೋರ್ಟಲ್ ನ ವಿವಿಧ ಸಮಸ್ಯೆಗಳ ಕಾರಣಗಳಿಂದ ಬಾಕಿಯಿರುವ ಪ್ರೋತ್ಸಾಹಧನವನ್ನು ನೀಡಲು ಕ್ರಮಕೈಗೊಳ್ಳಬೇಕು.
೨೦೧೯-೨೧ರ ವರೆಗಿನ ಕೋವಿಡ್ ವಿಶೇಷ ಪ್ರೋತ್ಸಾಹ ಧನ ಹಾಗೂ ನಾನ್ ಎಂಸಿಟಿಎಸ್ ಹಣ ರೂ.೨೦೦೦ನ್ನು ಎಲ್ಲಾ ಆಶಾಗಳಿಗೆ ಪಾವತಿಸಬೇಕು.
ಆಶಾ ಕಾರ್ಯಕ್ರಮದಲ್ಲಿ ಫೆಸಿಲಿಟೇಟರ್ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ಅವರ ಹುದ್ದೆಗೆ ತಕ್ಕಂತೆ ಮಾಸಿಕ ವೇತನ, ಪ್ರಯಾಣ ಭತ್ಯೆ ಇತ್ಯಾದಿಗಳನ್ನು ಹೆಚ್ಚಿಸಬೇಕು. ಆಶಾಗಳ ಸಂಖ್ಯೆಗೆ ಅನುಗುಣವಾಗಿ ಆಶಾ ಸುಗಮಗಾರರನನ್ನು ನೇಮಿಸಿ. ನಗರ ಪ್ರದೇಶಗಳಿಗೂ ಸುಗಮಕಾರರನ್ನು ನೇಮಿಸಿ.
ಆಶಾ ಕಾರ್ಯಕರ್ತೆಯರನ್ನು ಕಾರ್ಮಿಕರೆಂದು ಪರಿಗಣಿಸಿ, ಕನಿಷ್ಟ ವೇತನ, ಗ್ರಾಚ್ಯುಟಿ, ಪಿಎಫ್- ಇಎಸ್ ಐ ಸೌಲಭ್ಯ ನೀಡಿರಿ.