ವಿಜಯಪುರ: ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯ ವಿವಿಧ ನ್ಯಾಯಾಂಗ ಘಟಕಗಳಲ್ಲಿ ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಜವಾನ ಹುದ್ದೆಗಳು ಖಾಲಿ ಇವೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ: ಯಾವುದೇ ಹುದ್ದೆಗೆ ಅಪ್ಲಿಕೇಶನ್ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.
ಹುದ್ದೆಗಳ ವಿವರ: ಬೆರಳಚ್ಚು ನಕಲುಗಾರರು: 02 ಹುದ್ದೆಗಳು, ಆದೇಶ ಜಾರಿಕಾರರು: 06 ಹುದ್ದೆಗಳು
ಜವಾನ: 20 ಹುದ್ದೆಗಳು ಖಾಲಿ ಇವೆ.
ಬೆರಳಚ್ಚುಗಾರರು ಹುದ್ದೆಗೆ ವಿದ್ಯಾರ್ಹತೆ:
ದ್ವಿತೀಯ ಪಿಯುಸಿ ಉತ್ತೀರ್ಣ ಅಥವಾ 3 ವರ್ಷಗಳ ಡಿಪ್ಲೊಮ ಕಮರ್ಸಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಮತ್ತು ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರು ಹುದ್ದೆಗೆ ಶೈಕ್ಷಣಿಕ ಅರ್ಹತೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಾಸ್ ಅಥವಾ ತತ್ಸಮಾನ ವಿದ್ಯಾರ್ಹತೆ. ವಾಹನ ಚಾಲನ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ.
ಕೋರ್ಟ್ ಜವಾನ ಹುದ್ದೆಗೆ ಶೈಕ್ಷಣಿಕ ಅರ್ಹತೆ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ. ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ಅರ್ಜಿ ಸಲ್ಲಿಸಲು ಜುಲೈ 24 ಕೊನೆಯ ದಿನ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ
https://districts.ecourts.gov.in/vijayapura-onlinerecruitment ವೆಬ್ ಸೈಟ್ ಗೆ ಭೇಟಿ ನೀಡಬಹುದು.