ಮನೆ Uncategorized ವಿಜಯಪುರದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ: ಮಾಜಿ ಮ್ಯಾನೇಜರ್ ಸೇರಿ 15 ಮಂದಿ ಬಂಧನ

ವಿಜಯಪುರದ ಕೆನರಾ ಬ್ಯಾಂಕ್‌ ದರೋಡೆ ಪ್ರಕರಣ: ಮಾಜಿ ಮ್ಯಾನೇಜರ್ ಸೇರಿ 15 ಮಂದಿ ಬಂಧನ

0

ವಿಜಯಪುರ : ಜಿಲ್ಲೆಯ ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕಿನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಹಾಗೂ ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ವಾಚ್‌ಮನ್‌, ಇಲೆಕ್ಟ್ರೀಷಿಯನ್‌ ಸೇರಿದಂತೆ 15 ಆರೋಪಿಗಳನ್ನು ವಿಜಯಪುರ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಜಿಲ್ಲೆಯ ಮನಗೂಳಿ ಪಟ್ಟಣದಲ್ಲಿ ಮೇ ತಿಂಗಳಲ್ಲಿ ನಡೆದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಬ್ಯಾಂಕ್‌ನ ಹಿಂದಿನ ಹಿರಿಯ ವ್ಯವಸ್ಥಾಪಕ, ರೈಲ್ವೆ ಇಲಾಖೆ ಮೂವರು ನೌಕರರು, ಧಾರವಾಡದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಮತ್ತು ವಿವಿಧ ಖಾಸಗಿ ಕಂಪನಿಗಳ ನೌಕರರು, ಲಾರಿ ಚಾಲಕ, ಎಲೆ‌ಕ್ಟ್ರಿಷಿಯನ್ ಸೇರಿ 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಮನಗೂಳಿ ಕೆನರಾ ಬ್ಯಾಂಕ್‌ನ ಹಿಂದಿನ ಹಿರಿಯ ವ್ಯವಸ್ಥಾಪಕ ವಿಜಯಕುಮಾರ್ ಮಿರಿಯಾಲ (41), ಖಾಸಗಿ ಸಂಸ್ಥೆಯ ಉದ್ಯೋಗಿ ಚಂದ್ರಶೇಖರ ನೆರೆಲ್ಲಾ (38), ಸುನೀಲ ಮೋಕಾ (40) ಅವರನ್ನು ಹಿಂದೆಯೇ ಬಂಧಿಸಿ, ₹10.75 ಕೋಟಿ ಮೌಲ್ಯದ 10.5 ಕೆಜಿ ಚಿನ್ನಾಭರಣ ಮತ್ತು ಕರಗಿಸಿದ್ದ ಚಿನ್ನದ ಗಟ್ಟಿ ವಶಪಡಿಸಿಕೊಳ್ಳಲಾಗಿತ್ತು ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದರು.

39 ಕೆಜಿ ಚಿನ್ನ, ₹1.16 ಕೋಟಿ ನಗದು, ಕೃತ್ಯಕ್ಕೆ ಬಳಸಿದ ರೈಲ್ವೆ ಇಲಾಖೆಗೆ ಸೇರಿದ ಸರಕುಸಾಗಣೆ ಲಾರಿ, 4 ವಾಕಿಟಾಕಿ, ಪಿಸ್ತೂಲ್‌ ಮಾದರಿಯ ಸಿಗರೇಟ್‌ ಲೈಟರ್‌, ಎರಡು ಗ್ಯಾಸ್‌ ಸಿಲಿಂಡರ್‌, ಒಂದು ಆಮ್ಲಜನಕ ಸಿಲಿಂಡರ್‌, ಬರ್ನಿಂಗ್‌ ಗನ್‌, ನಕಲಿ ಕೀಲಿ ಕೈ, ವಿವಿಧ ಕಂಪನಿಗಳ ಐದು ಕಾರು ವಶಕ್ಕೆ ಪಡೆಯಲಾಗಿದೆ. ಬಂಧಿತರು 1.16 ಕೋಟಿ ನಗದ‌ನ್ನು ಗೋವಾದ ಕ್ಯಾಸಿನೊ ವೊಂದರಲ್ಲಿ ಜಮೆ ಮಾಡಿದ್ದರು ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದರು.